Thursday, November 19, 2026

ಪ್ರಾಯೋಗಿಕ ಆವೃತ್ತಿ

ರೈತನಿಂದ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಡ್ಯ ನಗರದ ಗುತ್ತಲು ಗ್ರಾಮ ಲೆಕ್ಕಾಧಿಕಾರಿ (ವಿಎ)ಯೊಬ್ಬರು ಬುಧವಾರ ಬೆಳಿಗ್ಗೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿ ರೂಪ ಎಂ.ಎಸ್ ಲೋಕಾಯುಕ್ತ ಬಲೆಗೆ ಬಿದ್ದವರು.

ಗುತ್ತಲು ಗ್ರಾಮದ ರೈತ ಆತ್ಮಾನಂದ ಎಂಬುವವರಿಂದ ಜಮೀನು ಒಟ್ಟುಗೂಡಿಸಿ, ಪೋಡಿ ಮಾಡಿ ಆರ್.ಟಿ.ಸಿ ಸಿದ್ದಪಡಿಸಲು 15 ಸಾವಿರ ರೂಪಾಯಿಗೆ ಲಂಚ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ. ಬುಧವಾರ ಬೆಳಿಗ್ಗೆ ಮಂಡ್ಯ ನಗರದಲ್ಲಿ ರೈತನಿಂದ 5 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಇನ್ಸ್’ಪೆಕ್ಟರ್ ಬ್ಯಾಟರಾಯಗೌಡ ನೇತೃತ್ವದ ತಂಡ ದಾಳಿ ನಡೆಸಿ ಹಣ ಸಹಿತ ಅಧಿಕಾರಿಯನ್ನು ಬಂಧಿಸಲಾಗಿದೆ.

ಲೋಕಾಯುಕ್ತ ಎಸ್ಪಿ ಪುಟ್ಟಮಾದಯ್ಯ, ಡಿವೈಎಸ್ಪಿ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಸಿಬ್ಭಂದಿಗಳಾದ ಶಂಕರ್, ಭರತ್, ನಂದಿನಿ,ಹೇಮಾವತಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ