Thursday, November 19, 2026

ಪ್ರಾಯೋಗಿಕ ಆವೃತ್ತಿ

ಕನ್ನಡಿಗರ ತೀವ್ರ ವಿರೋಧಕ್ಕೆ ಬೆಚ್ಚಿದ FSSAI : ಹಿಂದಿಯ ‘ದಹಿ’ ಕೈಬಿಟ್ಟು ಆದೇಶ ಪರಿಷ್ಕರಣೆ

ಕನ್ನಡಿಗರ ತೀವ್ರ ವಿರೋಧಕ್ಕೆ ಬೆಚ್ಚಿದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ನಂದಿನಿ ಉತ್ಪನ್ನವಾದ ಮೊಸರಿನ ಪ್ಯಾಕೆಟ್ ಮೇಲೆ ಹಿಂದಿಯಲ್ಲಿ ‘ದಹಿ’ ಎಂದು ಕಡ್ಡಾಯವಾಗಿ ಮುದ್ರಿಸುವಂತೆ ನೀಡಿದ ಆದೇಶವನ್ನು ವಾಪಸ್ ಪಡೆದು, ಇಂಗ್ಲೀಷ್ ಜತೆಗೆ ಪ್ರಾದೇಶಿಕ ಭಾಷೆಯಲ್ಲಿಯೇ ಮುದ್ರಿಸುವಂತೆ ತಿಳಿಸಿದೆ.

“>

‘ದಹಿ’ ಎಂಬ ಹಿಂದಿ ಪದ ಬಳಕೆ ವಿರುದ್ಧ ತಮಿಳುನಾಡಿನ ಸಿಎಂ ಸ್ಟಾಲಿನ್ ಕೂಡ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಳಿಗ್ಗೆ ಸರಣಿ ಟ್ವೀಟ್ ಮಾಡಿ ಹಿಂದಿ ಹೇರಿಕೆ ವಿರುದ್ಧ ಹಾಗೂ ಕೇಂದ್ರ ಬಿಜೆಪಿ ನಾಯಕರ ಮೇಲೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದಲ್ಲದೇ ಕನ್ನಡ ಪರ ಸಂಘಟನೆಯ ಮುಖಂಡರು ಹಿಂದಿ ಹೇರಿಕೆಯನ್ನು ತೀವ್ರವಾಗಿ ವಿರೋಧಿಸಿದ್ದರು.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ