Thursday, September 19, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು – ಮೈಸೂರು ಹೈವೇ | ಟೋಲ್ ದರ ಮತ್ತಷ್ಟು ಹೆಚ್ಚಳ – ನಾಳೆಯಿಂದಲೇ ಜನಸಾಮಾನ್ಯರ ಜೇಬಿಗೆ ಕತ್ತರಿ

ಬೆಂಗಳೂರು – ಮೈಸೂರು ಹೆದ್ದಾರಿ ಟೋಲ್ ಈಗಾಗಲೇ ದುಬಾರಿಯಾಗಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸುತ್ತಿರುವ ನಡುವೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏ.1ರಿಂದ ಶೇ.22ರಷ್ಟು ಹೆದ್ದಾರಿ ಟೋಲ್  ಹೆಚ್ಚಳ ಮಾಡಲು ತಯಾರಿ ನಡೆಸಿದೆ.

ಹೆದ್ದಾರಿಯಲ್ಲಿ ಓಡಾಡುವವರಿಗೆ ಟೋಲ್​ಗಿಂತ ಶೇಕಡಾ 22ರಷ್ಟು ದರ ದುಬಾರಿಯಾಗಲಿದೆ. ಟೋಲ್ ಸಂಗ್ರಹ ಆರಂಭವಾದ 17 ದಿನದಲ್ಲೇ ಮತ್ತೆ ಟೋಲ್ ದರ ಹೆಚ್ಚಳ ಮಾಡಲಾಗುತ್ತಿದೆ.

ಮಾರ್ಚ್ 14 ರಿಂದ ಟೋಲ್ ಸಂಗ್ರಹ ಆರಂಭವಾಗಿತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಪ್ರಕಾರ ದರ ಹೆಚ್ಚಳ ಮಾಡಲಾಗಿದ್ದು, ಬಿಡದಿ, ರಾಮನಗರ ವಾಹನ ಸವಾರರು ಸರ್ವಿಸ್ ರಸ್ತೆ ಬಳಸುವಂತೆ ಮನವಿ ಮಾಡಿದೆ. ಟೋಲ್ ದರ ಹೆಚ್ಚಳಕ್ಕೆ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದು, ಹೆದ್ದಾರಿ ಪ್ರಾಧಿಕಾರ ಜನಸಾಮಾನ್ಯರ ಲೂಟಿ ಮಾಡುತ್ತಿದೆ ಎಂದು ಕಿಡಿಕಾರುತ್ತಿದ್ದಾರೆ.

ಪರಿಷ್ಕೃತ ಟೋಲ್​ ದರ ಪಟ್ಟಿ 

  • ಕಾರು/ವ್ಯಾನ್/ಜೀಪ್: ಏಕಮುಖ ಸಂಚಾರ 165 ರೂ(30ರೂ ಹೆಚ್ಚಳ). ದ್ವಿಮುಖ ಸಂಚಾರ – 250 ರೂ(45ರೂ ಹೆಚ್ಚಳ).
  • ಲಘು ವಾಹನಗಳು/ಮಿನಿಬಸ್: 270 ರೂ.(50ರೂ ಹೆಚ್ಚಳ) ದ್ವಿಮುಖ ಸಂಚಾರ -405 ರೂ.(75 ರೂ. ಹೆಚ್ಚಳ)
    ಟ್ರಕ್/ ಬಸ್/ಎರಡು ಆಕ್ಸೆಲ್ ವಾಹನ – 565 ರೂ(165 ರೂ ಹೆಚ್ಚಳ), ದ್ವಿಮುಖ ಸಂಚಾರ – 850 ರೂ(160 ರೂ.ಹೆಚ್ಚಳ)
  • ತ್ರಿ ಆಕ್ಸೆಲ್ ವಾಣಿಜ್ಯ ವಾಹನಗಳು: ಏಕ‌ಮುಖ ಸಂಚಾರ 615 ರೂ.(115ರೂ ಹೆಚ್ಚಳ), ದ್ವಿ ಮುಖಸಂಚಾರ – 925 ರೂ.( 225 ರೂ.ಹೆಚ್ಚಳ)
  • ಭಾರೀ ಕಟ್ಟಡ ನಿರ್ಮಾಣ ವಾಹಗನಳು/ಅರ್ಥ್ ಮೂವರ್ಸ್‌/4-6 ಆಕ್ಸೆಲ್ ವಾಹನಗಳು: 885 ರೂ.(165ರೂ ಹೆಚ್ಚಳ) ದ್ವಿಮುಖ ಸಂಚಾರ – 1,330 ರೂ. ಹೆಚ್ಚಳ(250ರೂ ಹೆಚ್ಚಳ)
  • 7 ಅಥವಾ ಅದಕ್ಕಿಂತ ಎಕ್ಸೆಲ್ ವಾಹನಗಳು: 1,080 ರೂ.(200ರೂ ಹೆಚ್ಚಳ) ದ್ವಿಮುಖ ಸಂಚಾರ – 1,620 ರೂ.( 305 ರೂ.ಹೆಚ್ಚಳ)

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!