Friday, September 20, 2024

ಪ್ರಾಯೋಗಿಕ ಆವೃತ್ತಿ

ಎಸ್ಸೆಸ್ಸೆಲ್ಸಿ ಪರೀಕ್ಷಾ ಕರ್ತವ್ಯದಲ್ಲಿದ್ದ ಶಿಕ್ಷಕನ ಎಲೆಕ್ಟ್ರಿಕಲ್ ಬೈಕ್ ಸ್ಪೋಟ : 4 ಬೈಕುಗಳು ಬೆಂಕಿಗಾಹುತಿ

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಪೋಟಗೊಂಡು 4 ಕ್ಕೂ ಹೆಚ್ಚು ಬೈಕ್ ಬೆಂಕಿಗಾಹುತಿಯಾದ ಘಟನೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.

“>
ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿವೇಕಾನಂದ ಪ್ರೌಢಶಾಲೆ ಶಿಕ್ಷಕ ಪ್ರಕಾಶ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡಿದೆ.

ಇಂದು ಬೆಳಿಗ್ಗೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಎಸ್ ಎಸ್ ಎಲ್ ಸಿ ಪರೀಕ್ಷೆ ಗೆ ಆಯೋಜನೆಗೊಂಡಿದ್ದ ಶಿಕ್ಷಕರು ಹೊರಗಡೆ ನಿಲ್ಲಿಸಿ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಸ್ಟೋಟಗೊಂಡಿದ್ದು ಈ ವೇಳೆ ಅಕ್ಕಪಕ್ಕ ನಿಲ್ಲಿಸಿದ್ದ ಮೂರು ಬೈಕ್ ಸಹ ಬೆಂಕಿಗಾಹುತಿ ಯಾಗಿದೆ

ಸ್ಥಳಕ್ಕೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!