Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಬಿಜೆಪಿಯಲ್ಲಿ ಒಳಒಪ್ಪಂದದ ರಾಜಕಾರಣ : ಬಿಜೆಪಿ ಮುಖಂಡ ಪಿ.ಸಿ.ರಘು ಆರೋಪ

ಮಂಡ್ಯ ಜಿಲ್ಲಾ ಬಿಜೆಪಿಯಲ್ಲಿ ಸ್ವತಃ ಬಿಜೆಪಿ ಮುಖಂಡರೇ ಒಳಒಪ್ಪಂದ ಮಾಡಿಕೊಂಡು ತಮ್ಮ ಪಕ್ಷದವರನ್ನೇ ಸೋಲಿಸುವ ರಾಜಕಾರಣ ಮಾಡುತ್ತಿದ್ದಾರೆಂದು ಮದ್ದೂರು ಮಂಡಲ ಬಿಜೆಪಿ ಅಧ್ಯಕ್ಷ ಪಿ.ಸಿ.ರಘು ಆರೋಪಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಪರಿಷತ್ತಿನ ಪದವೀಧರರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಹಿಡಿದಲ್ಲಿದ್ದ ಮತಗಳಗಳು ಕೂಡ ಪಕ್ಷದ ಅಭ್ಯರ್ಥಿಗೆ ಚಲಾವಣೆಗೊಂಡಿಲ್ಲ, ಇದಕ್ಕೆ ಕಾರಣರಾರು ? ಈ ಒಳಒಪ್ಪಂದದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಮದ್ದೂರು ತಾಲ್ಲೂಕಿನ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ಸೇರಿದಂತೆ ಜಿಲ್ಲೆಯ ನಾಯಕರು ಶಾಮೀಲಾಗಿರಬಹುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ಎಲ್ಲಾ ಮಾಹಿತಿಗಳನ್ನು ನೀಡುತ್ತೇನೆಂದು ತಿಳಿಸಿದರು.

ಮಂಡ್ಯ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ, ಕಾರ್ಯಕರ್ತರನ್ನು ಗಣನೆಗೆ ತೆಗೆಕೊಳ್ಳುತ್ತಿಲ್ಲ, ಅಲ್ಲದೇ ಕಾರ್ಯಕರ್ತರ ಬಗ್ಗೆ ”ಇವನ ಕೈಲಿ ಏನೂ ಆಗುವುದಿಲ್ಲ” ಎಂದು ಮಾತನಾಡುವ ಮೂಲಕ ಕಾರ್ಯಕರ್ತರನ್ನು ಮೂಲೆ ಗುಂಪು ಮಾಡುತ್ತಿದ್ಧಾರೆಂದು ದೂರಿದರು.

ಮಂಡ್ಯ ಜಿಲ್ಲಾ ಬಿಜೆಪಿ ಉಸ್ತುವಾರಿ ನಿರ್ಮಲ್ ಕುಮಾರ್ ಸುರಾನ ಅವರು ನಿಷ್ಠ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಂಡು ಕನಿಷ್ಠ ಮಾತನಾಡಿಸುವ ಸೌಜನ್ಯವನ್ನು ತೋರುತ್ತಿಲ್ಲ, ಬದಲಾಗಿ ಹಣ ಇರುವ ವ್ಯಕ್ತಿಗಳನ್ನು ಮಾತ್ರ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತು ನಾನು ಬಿಜೆಪಿಗೆ ರಾಜೀನಾಮೆ ನೀಡುತ್ತಿದ್ದೇನೆ, ಇನ್ನು ಮೂರ್‍ನಾಲ್ಕು ದಿನದಲ್ಲಿ ತನ್ನ ಬೆಂಬಲಿಗರ ಜೊತೆ ಬೇರೆ ಪಕ್ಷವನ್ನು ಸೇರುವ ತೀರ್ಮಾನ ಕೈಗೊಳ್ಳುತ್ತೇನೆಂದರು.

ಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ನರೇಶ್ ಕುಮಾರ್, ನಾಗೇಶ್, ಶ್ರೀನಿವಾಸ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ