ಮಂಡ್ಯ ತಾಲ್ಲೂಕಿನ ತೂಬಿನಕೆರೆ ಬಳಿ ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.
ನೊದೆಕೊಪ್ಪಲು ಗ್ರಾಮದ 65 ವರ್ಷದ ಚಿಕ್ಕೀರೆಗೌಡ ಮೃತಪಟ್ಟ ವ್ಯಕ್ತಿ. ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಗ್ರಾಮದಿಂದ ತೂಬಿನಕೆರೆ ಗ್ರಾಮದ ಬ್ಯಾಂಕ್’ಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ ತೀವ್ರ ಗಾಯಗೊಂಡು ವ್ಯಕ್ತಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಆಗಮಿಸಿ ದೂರು ದಾಖಲಿಸಿಕೊಂಡಿದ್ದಾರೆ.




