Wednesday, October 23, 2024

ಪ್ರಾಯೋಗಿಕ ಆವೃತ್ತಿ

”ಒಂದು ಶ್ರೇಣಿ ಒಂದು ಪಿಂಚಣಿ” ಯೋಜನೆ ತಾರತಮ್ಯ ಹೋಗಲಾಡಿಸಲು ಮಾಜಿ ಸೈನಿಕರ ಮನವಿ

”ಒಂದು ಶ್ರೇಣೆ ಒಂದು ಪಿಂಚಣಿ” ಯೋಜನೆಯಡಿ ಸೇನೆಯಿಂದ ನಿವೃತ್ತಿಗೊಂಡ ಅಧಿಕಾರಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪಿಂಚಣಿ ಹಾಗೂ ಮಾಜಿ ಸೈನಿಕರಿಗೆ ಅದಕ್ಕಿಂತ ಕಡಿಮೆ ಪಿಂಚಣಿ ನೀಡುತ್ತಿದ್ದು, ಈ ತಾರತಮ್ಯ ಹೋಗಲಾಡಿಸಿ ಎಲ್ಲರಿಗೂ ಸಮಾನವಾದ ಪಿಂಚಣಿ ಯೋಜನೆ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಂಡ್ಯ ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಲಾಯಿತು.

ಈ ಹಿಂದಿನಿಂದಲೂ ಸಬ್ಕಾ ಸೈನಿಕ ಸಂಘರ್ಷ ಸಮಿತಿಯು ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಗಳಲ್ಲಿ ಕಳೆದ 12 ವರ್ಷಗಳಿಂದ ಸೈನಿಕರ ಹಕ್ಕುಗಳಿಗಾಗಿ ಹೋರಾಟ ಮಾಡಲಾಗುತ್ತಿದೆ. ಅಲ್ಲದೇ ಉಪವಾಸ ಸತ್ಯಾಗ್ರಹ ಸೇರಿದಂತೆ ನೂರಾರು ಪ್ರತಿಭಟನೆಗಳನ್ನು ಮಾಡಿದ್ದೇವೆ. ಕಳೆದ ನ.14,2022 ರಂದು, ದೇಶಾದ್ಯಂತದ ಸಾವಿರಾರು ಮಾಜಿ ಸೈನಿಕರು ದೆಹಲಿಯಲ್ಲಿ ಜಂತರ್ ಮಂತರ್‌ನಲ್ಲಿ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲಾಗಿದೆ ಎಂದರು.

ಪ್ರಸ್ತುತ 20 ಫೆಬ್ರವರಿ 2023 ರಂದು ಸುಮಾರು 50,000 ಮಾಜಿ ಸೈನಿಕರು, ದೆಹಲಿ ಜಂತರ್ ಮಂತರ್‌ನಲ್ಲಿ 87 ಮಾಜಿ ಸೈನಿಕರ ಒಕ್ಕೂಟದ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರವು ಮಾಜಿ ಸೈನಿಕರ ಬೇಡಿಕೆಗಳನ್ನು ಈಡೇರಿಸಲು ಮೀನಾಮೇಷ ಎಣಿಸುತ್ತಿದೆ. ಆದ್ದರಿಂದ ಇಂದು ದೇಶಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಲ್ಲರಾಜು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!