Thursday, September 19, 2024

ಪ್ರಾಯೋಗಿಕ ಆವೃತ್ತಿ

”ನಂಜನಗೂಡು ನಂಜುಂಡೇಶ್ವರನ ದೇವರ ಹುಂಡಿಗೆ ಬಿಜೆಪಿ ಕನ್ನ” : ಹೆಚ್.ಡಿ.ಕುಮಾರಸ್ವಾಮಿ

ನಾಡಿಗೆ ನಾಡೇ ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುವ ನಂಜನಗೂಡಿನ ಶ್ರೀ ನಂಜುಂಡೇಶ್ವರ ದೇವರ ಹುಂಡಿಗೆ ಬಿಜೆಪಿ ಶಾಸಕ ಬಿ.ಹರ್ಷವರ್ದನ್‌ ಅವರು ಕೈ ಹಾಕಿರುವುದು ದೈವಕ್ಕೆ ಎಸಗಿದ ಅಪಮಾನ. ಇದು ಯೋಜನೆಗಳ ಹೆಸರಿನಲ್ಲಿ ದೇವರ ಹುಂಡಿಗೂ ಕನ್ನ ಕೊರೆಯುವ ಬಿಜೆಪಿಯ ನೈಜ ಜಾಯಮಾನ. ಕಮಲಪಕ್ಷ ಮತ್ತೊಮ್ಮೆ ಬೆತ್ತಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದರು.

“>

ಸ್ವಯಂ ಘೋಷಿತ ಧರ್ಮೋದ್ಧಾರಕರು, ಹಿಂದೂ ಧರ್ಮವನ್ನು ಗುತ್ತಿಗೆಗೆ ಪಡೆದುಕೊಂಡವರೆಂದು ಬೀಗುವವರಿಗೆ ಧರ್ಮವೆಂದರೆ ಅಧಿಕಾರಕ್ಕಿರುವ ರಾಜಮಾರ್ಗವಾಗಿದೆ. ದೇವರ ಹುಂಡಿ ಎಂಬುದು ಲಜ್ಜೆಗೆಟ್ಟು ಹೊಡೆದುಕೊಳ್ಳುವ ನಿಧಿ. ಇವರಿಗೆ ನಾಚಿಕೆ, ಸಂಕೋಚ ಎನ್ನುವುದು ಕನಿಷ್ಠಕ್ಕಿಂತ ಕಡಿಮೆ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಹೇಳುವುದು ಒಂದು, ಮಾಡುವುದು ಇನ್ನೊಂದು. ಧರ್ಮ, ದೇವರು ಎನ್ನುವುದು ಬಿಜೆಪಿಗೆ ಮತ ಫಸಲು ಕೊಡುವ ಸಾಧನಗಳಷ್ಟೇ. ಶ್ರದ್ಧೆ, ಭಕ್ತಿ ಜನರದ್ದು; ಭುಕ್ತಿ ಮಾತ್ರ ಬಿಜೆಪಿಯದ್ದು. ನೀಚತನದ ಪರಮಾವಧಿ ಇದು. ಸಮುದಾಯ ಭವನಗಳ ನಿರ್ಮಾಣಕ್ಕೆ ದೇವರ ದುಡ್ಡೇ ಬೇಕೆ? ಕೇತ್ರಕ್ಕೆ ಸರಕಾರ ಕೊಟ್ಟ ಹಣ, ಶಾಸಕರ ವಿಶೇಷ ಅನುದಾನ ಇತ್ಯಾದಿಗಳೆಲ್ಲ ಎಲ್ಲಿ ಹೋದವು? ರಾಜ್ಯ ಬಿಜೆಪಿ ಸರಕಾರವು ಶ್ರೀನಂಜುಂಡೇಶ್ವರ ದೇವರ ಹುಂಡಿಯನ್ನು ಎಗರಿಸುವ ಶಾಸಕರ ಧೂರ್ತ ಪ್ರಯತ್ನಕ್ಕೆ ತಡೆ ಹಾಕಬೇಕು. ಈ ಬಗ್ಗೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು. ದೇವರ ದುಡ್ಡನ್ನು ದೇವಾಲಯದ ಅಭಿವೃದ್ಧಿಗೇ ಬಳಸಬೇಕು ಅವರು ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!