Friday, November 20, 2026

ಪ್ರಾಯೋಗಿಕ ಆವೃತ್ತಿ

ಜೆಡಿಎಸ್ ಅಧಿಕಾರಕ್ಕೆ ಬರಲು ಹೆಚ್.ಡಿ.ಕುಮಾರಸ್ವಾಮಿ ಕೈ ಬಲಪಡಿಸಿ : ಡಿ.ಸಿ.ತಮ್ಮಣ್ಣ

ಪ್ರತಿಯೊಬ್ಬ ಕಾರ್ಯಕರ್ತರು ಮನೆ ಮನೆಗೆ ತೆರಳಿ ಜೆಡಿಎಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಜತೆಗೆ
ಹೆಚ್.ಡಿ.ಕುಮಾರಸ್ವಾಮಿ ಅವರ ಕೈಬಲಪಡಿಸಬೇಕೆಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.

ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಗ್ರಾ.ಪಂ. ವ್ಯಾಪ್ತಿಯ ಭೂತ್ ಕಮಿಟಿ ಸದಸ್ಯರನ್ನು ಭೇಟಿ
ಮಾಡಿ ಮಾತನಾಡಿದ ಅವರು ಪ್ರಸಕ್ತ ಎದುರಾಗಿರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ಪಷ್ಟ
ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದು ಕುಮಾರಸ್ವಾಮಿ ಅವರು ಮತ್ತೊಮ್ಮೆ ರಾಜ್ಯದ
ಮುಖ್ಯಮಂತ್ರಿಯಾಗಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲಾ ವರ್ಗದ ಜನರಿಗೆ ಅನುಕೂಲವಾಗಲೆಂಬ ಸದುದ್ದೇಶದಿಂದ ಪಂಚರತ್ನ ರಥಯಾತ್ರೆಯನ್ನು ಜಾರಿಗೊಳಿಸಿದ್ದು ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ರೈತರ, ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು
ನೀಡಿದ್ದು ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನ, ವಿಕಲಚೇತನರಿಗೆ 5
ಸಾವಿರ ರೂ. ಪ್ರೋತ್ಸಾಹಧನ ಇನ್ನಿತರೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದ್ದು
ಇದನ್ನರಿತು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಆಶೀರ್ವದಿಸಬೇಕೆಂದು ಕೋರಿದರು.

ಪಕ್ಷದ ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ ಮಾತನಾಡಿ ಕಳೆದ ಎರಡು ದಶಕಗಳಿಂದಲೂ ಶಾಸಕ ಡಿ.ಸಿ. ತಮ್ಮಣ್ಣ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ಹಲವಾರು ಶಾಶ್ವತ ಯೋಜನೆಗಳನ್ನು ಕೈಗೊಂಡಿರುವ ಶಾಸಕರನ್ನು ಕ್ಷೇತ್ರದ ಮತದಾರರು ಮತ್ತೊಮ್ಮೆ ಆಶೀರ್ವದಿಸಿ ಬೆಂಬಲಿಸಬೇಕೆಂದು ಕೋರಿದರು.
ಪ್ರತಿ ಗ್ರಾಮದಲ್ಲಿ ಜೆಡಿಎಸ್ ಪಕ್ಷವು ಗಟ್ಟಿಯಾಗಿ ನೆಲೆಯೂರಿದ್ದು ತಮ್ಮ ಆಶೀರ್ವಾದದಿಂದ ಡಿ.ಸಿ. ತಮ್ಮಣ್ಣ
ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲಿದ್ದು ನೆನೆಗುದಿಗೆ ಬಿದ್ದಿರುವ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮಾದರಿ ಕ್ಷೇತ್ರವನ್ನಾಗಿಸಲಿದ್ದಾರೆಂದರು.

ಈ ವೇಳೆ ಯುವ ಘಟಕದ ಉಪಾಧ್ಯಕ್ಷ ಶಿವಚರಣ್, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಹೊನ್ನೇಗೌಡ, ರಾಜ್ಯ
ಪ್ರದಾನಕಾರ್ಯದರ್ಶಿ ಚಾಮನಹಳ್ಳಿ ಸಿ.ಕೆ. ಸ್ವಾಮಿಗೌಡ, ಮಹಿಳಾ ಅಧ್ಯಕ್ಷೆ ಪದ್ಮಹರೀಶ್, ಗೀತಾ, ವಸಂತ, ಯಜಮಾನ್ ವಿಷಕಂಠಯ್ಯ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ