ಕನಕಪುರ ತಾಲ್ಲೂಕಿನ ಸಾತನೂರಿನಲ್ಲಿ ಜಾನುವಾರು ಸಾಗಿಸುವ ವಾಹನದ ಚಾಲಕನನ್ನು ಹತ್ಯೆಗೈದ ಆರೋಪ ಹೊತ್ತಿರುವ ಪುನೀತ್ ಕೆರೆಹಳ್ಳಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಜಾನುವಾರು ವ್ಯಾಪಾರಿಯನ್ನು ಕೊಲೆ ಮಾಡಿದ್ದೂ ಅಲ್ಲದೆ, ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುವ ಕೊಲೆಗಡುಕನ ಧೈರ್ಯದ ಹಿಂದಿನ ಕಾರಣವೇನು?
ಗೃಹಸಚಿವರು ಕೊಲೆ ಆರೋಪಿಯನ್ನು ತಮ್ಮದೇ ಮನೆಯಲ್ಲಿಟ್ಟುಕೊಂಡು ವಿಡಿಯೋ ಮೂಲಕ @siddaramaiah ಅವರಿಗೆ ಬೆದರಿಕೆ ಹಾಕಿಸುತ್ತಿದ್ದಾರೆಯೇ?@JnanendraAraga
ಕೊಲೆ ಆರೋಪಿಯ ರಕ್ಷಣೆಗೆ ನಿಂತಿರುವರೆ? pic.twitter.com/yruw6g7D9T— Karnataka Congress (@INCKarnataka) April 4, 2023
“>
ನೆಟ್ಟಿಗರ ಆಕ್ರೋಶ
ಗೋ ರಕ್ಷಕನೆಂದು ಹೇಳಿಕೊಂಡು ಹಣ ಕೀಳುವ ದಂಧೆ ಮಾಡುತ್ತಿದ್ದಾನೆನ್ನಲಾದ ಪುನೀತ್ ಕೆರೆಹಳ್ಳಿಯ ಮೇಲೆ ಮಂಡ್ಯದ ಜಾನುವಾರು ವ್ಯಾಪಾರಿ ಇದ್ರೀಸ್ ಪಾಷಾ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ 2 ಎಫ್ಐಆರ್ ಗಳು ದಾಖಲಾಗಿವೆ. ಹೀಗಿದ್ದರೂ ಇಂತಹ ಕೊಲೆ ಆರೋಪಿಯನ್ನು ಬಂಧನ ಮಾಡದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಧರ್ಮ ಮತ್ತು ದೇವರ ಬಗ್ಗೆ ಕೇವಲ ಹೇಳಿಕೆ ನೀಡಿದ ಚೇತನ ಅಹಿಂಸಾ ಅವರನ್ನು ತಕ್ಷಣ ಬಂಧಿಸಿದ ಪೊಲೀಸರು, ಪುನೀತ್ ಕೆರೆಹಳ್ಳಿ ವಿಚಾರದಲ್ಲಿ ಏಕೆ ಅಂತಹದ್ದೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
ಅಂದರೆ ಅನ್ಯ ಕೋಮಿನ ವ್ಯಕ್ತಿ ಪ್ರಾಣಕ್ಕೆ ಬೆಲೆ ಇಲ್ಲವೇ ? ಅದರಲ್ಲೂ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ರಾತ್ರೋರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಲೈವ್ ಬಂದು ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನ ನಾಯಕರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ನಿಂದಿಸಿ, ಕೊಲೆ ಬೆದರಿಕೆ ಹಾಕಿದವನು, ಪೊಲೀಸರ ಕೈಗೆ ಸಿಗುತ್ತಿಲ್ಲವೇ ? ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿ ಗೃಹ ಸಚಿವರು ಹಾಗೂ ಪೊಲೀಸರ ನಿಷ್ಕ್ರಿಯತೆಗೆ ಕಿಡಿಕಾರಿದೆ.




