ವರದಿ : ಪ್ರಭು ವಿ.ಎಸ್
ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಸಂಘಟಿಸುವ ಜತೆಗೆ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಕೆಪಿಸಿಸಿ ನೂತನ ಸದಸ್ಯ ಕದಲೂರು ರಾಮಕೃಷ್ಣ ಹೇಳಿದರು.
ಕೆಪಿಸಿಸಿ ನೂತನ ಸದಸ್ಯರಾಗಿ ಆಯ್ಕೆಯಾದ ನಂತರ ಸ್ಥಳೀಯ ಕಾಂಗ್ರೆಸ್ ಮುಖಂಡರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದಲೂ ನಿಷ್ಟಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, ಅಧ್ಯಕ್ಷರಾಗಿ ಹತ್ತು ಹಲವು ಹುದ್ದೆಗಳನ್ನು ಅಲಂಕರಿಸಿದ್ದು ಪಕ್ಷವು ನನ್ನನ್ನು ಗುರುತಿಸಿ ಕೆಪಿಸಿಸಿ ಸದಸ್ಯರನ್ನಾಗಿ ಆಯ್ಕೆ ಮಾಡಿರುವ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ
ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಮುಂದಿನ ದಿನಗಳಲ್ಲೂ ತಮ್ಮ ಸಹಕಾರ ಅತ್ಯಗತ್ಯವಾಗಿದ್ದು ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಹಗಲಿರುಳು ಶ್ರಮಿಸುವಂತೆ ತಿಳಿಸಿದರು.
ಈ ವೇಳೆ ಪುರಸಭೆ ಮಾಜಿ ಅಧ್ಯಕ್ಷ ಎಂ.ಪಿ. ಅಮರ್ಬಾಬು, ಮಾಜಿ ಸದಸ್ಯ ಡಾಬಾ ಮಹೇಶ್, ಮುಖಂಡರಾದ ಅರುಣ್, ಸಿದ್ದು, ರಘು, ಕೃಷ್ಣೇಗೌಡ, ಜೋಗೀಗೌಡ ಇತರರಿದ್ದರು.




