Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯದಿಂದ ಪಿ.ರವಿಕುಮಾರ್, ಕೆ.ಆರ್.ಪೇಟೆಯಿಂದ ಬಿ.ಎಲ್.ದೇವರಾಜ್ ಗೆ ಕಾಂಗ್ರೆಸ್ ಟಿಕೆಟ್

ಕಾಂಗ್ರೆಸ್ ಪಕ್ಷ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು,ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಗಣಿಗ ಪಿ.ರವಿಕುಮಾರ್ ಹಾಗೂ ಕೆ.ಆರ್.ಪೇಟೆಯಿಂದ ಬಿ.ಎಲ್‌.ದೇವರಾಜು ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಮದ್ದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ‌. ಇಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯಲು ಕದಲೂರು ಉದಯ್ ಹಾಗೂ ಗುರುಚರಣ್ ಮಧ್ಯೆ ತೀವ್ರ ಪೈಪೋಟಿ ನಡೆದಿದ್ದು, ಯಾರಿಗೆ ಕಾಂಗ್ರೆಸ್ ಟಿಕೆಟ್ ಒಲಿಯುವುದೋ ಎಂಬುದು ಕುತೂಹಲ ಮೂಡಿಸಿದೆ.

ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಎಲ್ಲಾ ಐದು ಕ್ಷೇತ್ರಗಳ ಟಿಕೆಟ್ ಘೋಷಣೆಯಾಗಿದ್ದು,
ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಿದೆ.

ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು 16 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಗಣಿಗ ರವಿಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಮತ್ತೊಂದು ಅವಕಾಶ ನೀಡಿದೆ.

ಕೆ‌.ಆರ್.ಪೇಟೆ ಕ್ಷೇತ್ರದಲ್ಲಿ ಬಿ‌.ಎಲ್.ದೇವರಾಜ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದು, ಮತ್ತೋರ್ವ ಪ್ರಬಲ ಆಕಾಂಕ್ಷಿ ವಿಜಯ್ ರಾಮೇಗೌಡ ಅವರಿಗೆ ನಿರಾಸೆಯಾಗಿದೆ‌. ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಪಕ್ಷ ಸೇರಿದ್ದ ಬಿ‌.ಎಲ್‌.ದೇವರಾಜುಗೆ ಟಿಕೆಟ್ ನೀಡಿ ಅನುಕಂಪದ ಲಾಭ ಪಡೆಯಲು ಮುಂದಾಗಿದೆ‌.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ