ಅನಾರೋಗ್ಯ ಹಾಗೂ ವಯಸ್ಸಿನ ಕಾರಣದಿಂದ ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಎಂಬುದು ಸಂಪೂರ್ಣ ಸುಳ್ಳು. ನಾನು ಆರೋಗ್ಯವಾಗಿದ್ದು,ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ ಎಂದು ಶಾಸಕ ಎಂ. ಶ್ರೀನಿವಾಸ್ ಸ್ಪಷ್ಟಪಡಿಸಿದರು.
ಶಾಸಕ ಎಂ.ಶ್ರೀನಿವಾಸ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆಂದು ಕೆಲ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಈ ಹಿನ್ನಲೆಯಲ್ಲಿ ನುಡಿ ಕರ್ನಾಟಕ.ಕಾಂ ಜೊತೆ ಮಾತನಾಡಿದ ಅವರು, ನಾನು ರಾಜಕೀಯ ನಿವೃತ್ತಿ ಘೋಷಿಸಿದ್ದೇನೆ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದೆ. ಇದು ಸಂಪೂರ್ಣ ಸುಳ್ಳಾಗಿದ್ದು, ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ ಎಂದರು.
ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ನನ್ನನ್ನು ವರಿಷ್ಠರಾದ ಎಚ್.ಡಿ.ಕುಮಾರಸ್ವಾಮಿ ಆಯ್ಕೆ ಮಾಡಿದ್ದಾರೆ. ನಾನು ಆರೋಗ್ಯವಾಗಿದ್ದು,ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಿದರು.




