Thursday, November 19, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿ : ನೆ.ಲ.ನರೇಂದ್ರಬಾಬು

ಜಿಲ್ಲೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಕಮಲ ಅರಳಿಸುವುದರ ಮೂಲ ರಾಜ್ಯದಲ್ಲಿ ಮತ್ತೊಮ್ಮೆ ಸ್ವತಂತ್ರವಾಗಿ ಅಧಿಕಾರ ಹಿಡಿಯಲು ಬಿಜೆಪಿ ಪಕ್ಷಕ್ಕೆ ಬಹುಮತ ನೀಡಬೇಕೆಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ‌.ಲ. ನರೇಂದ್ರಬಾಬು ಮನವಿ ಮಾಡಿದರು.

ಮಳವಳ್ಳಿ ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷದ ವತಿಯಿಂದ ನಡೆದ ಜಿಲ್ಲಾ ಮಟ್ಟದ ಹಿಂದುಳಿದ ವರ್ಗಗಳ ಮೋರ್ಚಾ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದುಳಿದ ಸಮುದಾಯದ ಅಭಿವೃದ್ದಿಗೆ ಶ್ರಮಿಸಿರುವ ಬಿಜೆಪಿ ಪಕ್ಷವು ಮತ್ತೊಮ್ಮೆ ಸ್ವತಂತ್ರವಾಗಿ ಅಧಿಕಾರ ಹಿಡಿಯುವಂತೆ ಮಾಡಲು ಮಂಡ್ಯ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿಯೂ ಬಿಜೆಪಿ ಪಕ್ಷ ಗೆಲ್ಲಿಸಲು ಮುಂದಾಗಬೇಕೆಂದು ಕೋರಿದರು.

ರಾಜ್ಯದ ಅಭಿವೃದ್ದಿ ಡಬಲ್ ಇಂಜಿನ್ ಸರ್ಕಾರದಿಂದ ಮಾತ್ರ ಸಾಧ್ಯವಾಗುವುದರಿಂದ ರಾಜ್ಯದಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳಲು ಹಾಗೂ ಪ್ರಧಾನಿ ನರೇಂದ್ರಮೋದಿ ಅವರ ಜನಪರ ಆಡಳಿತಕ್ಕೆ ಶಕ್ತಿ ತುಂಬಲು ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕೆಂದರು. ಮೋದಿಯವರು ನೀರಿಗಾಗಿ ಪರಿತಪ್ಪಿಸುವುದನ್ನು ತಪ್ಪಿಸಲು ರಾಷ್ಟ್ರಕ್ಕೆ ನೀರಿನ ಸೌಲಭ್ಯ ಕಲ್ಪಿಸಿದರು. ಸ್ವಚ್ಚ ಭಾರತ್ ಅಡಿಯಲ್ಲಿ ದೇಶವನ್ನೇ ಸ್ವಚ್ಚವನ್ನಾಗಿ ಮಾಡಿದರು. ಸ್ವದೇಶಿ ವಸ್ತುಗಳನ್ನು ಬಳಸುವಂತೆ ಪ್ರೇರೇಪಿಸಿದರು, ದೇಶ ಕಾಯುವ ಯೋಧರಿಗೆ ಸ್ವಂತ ನಿರ್ಧಾರ ತೆಗೆದುಕೊಳ್ಳುವಂತೆ ಮಾಡಿ ಶತ್ರು ಸೈನ್ಯದಲ್ಲಿ ಭಯ ಉಂಟು ಮಾಡುವಂತೆ ಮಾಡಿದ್ದಾರೆ. ಇಂತಹ ಪ್ರಧಾನಿ ದೇಶಕ್ಕೆ ಅವಶ್ಯಕತೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ. ಉಮೇಶ್ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ಸದೃಢವಾಗಿ ಬೆಳೆದಿದ್ದು ವಿಧಾನ ಸಭಾ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲಿದೆ ಎಂದರು.

ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ವಿಶ್ವಮಟ್ಟದಲ್ಲಿ ಭಾರತ ದೇಶವನ್ನು ಪ್ರಸಿದ್ದಿಗೊಳಿಸುತ್ತಿದ್ದು. ನರೇಂದ್ರಮೋದಿ ಅವರಿಗೆ ಶಕ್ತಿ ತುಂಬಲು ಪ್ರತಿಯೊಬ್ಬರು ಬಿಜೆಪಿ ಪಕ್ಷಕ್ಕೆ ಮತ ಹಾಕುವುದರ ಮೂಲಕ ಗೆಲ್ಲಿಸಬೇಕೆಂದು ಕೋರಿದರು

ನರೇಂದ್ರ ಮೋದಿ ಅವರ ಎಲ್ಲಾ ಸಮುದಾಯದವರಿಗೆ ಸೌಲಭ್ಯ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಪಕ್ಷ ಹಿಂದುಳಿದ ಸಮುದಾಯ ಅಭಿವೃದ್ಧಿಗೆ ಹಲವಾರು ಸೌಲಭ್ಯಗಳನ್ನು ನೀಡಿದೆ.ಮೇ 10 ರಂದು ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಗೆಲ್ಲಿಸುವುದರ ಮೂಲಕ ಅಭಿವೃದ್ದಿಗೆ ಸಹಕಾರ ನೀಡಬೆಕೆಂದು ಹೇಳಿದರು.

ಸಭೆಯಲ್ಲಿ ಮಾಜಿ ಸಚಿವ ಬಿ.ಸೋಮಶೇಖರ್, ಓಬಿಸಿ ಪ್ರಧಾನ ಕಾರ್ಯದರ್ಶಿ ಸುರೇಶ್ ಬಾಬು, ಓಬಿಸಿ ಜಿಲ್ಲಾಧ್ಯಕ್ಷ ಎಂ.ಬಿ‌.ರಮೇಶ್, ಮಂಡಲ ಅಧ್ಯಕ್ಷ ಕೃಷ್ಣ, ಬಿಜೆಪಿ ಮುಖಂಡರಾದ ಮುನಿರಾಜು, ಯಮದೂರು ಸಿದ್ದರಾಜು, ಲಕ್ಷ್ಮಿನಾರಾಯಣ್, ಸತೀಶ್ ಕುಮಾರ್, ಮಧು ಗಂಗಧಾರ್, ಕುಮಾರಸ್ವಾಮಿ, ಎಚ್ ಆರ್ ಅಶೋಕ್ ಕುಮಾರ್ ಲಿಂಗರಾಜು, ಬಸವರಾಜು, ದೇವರಾಜು, ಕೆ.ಸಿ ನಾಗೇಗೌಡ , ಅಶೋಕ್‌ಕುಮಾರ್ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ