Thursday, November 19, 2026

ಪ್ರಾಯೋಗಿಕ ಆವೃತ್ತಿ

ಅಭಿವೃದ್ಧಿ ವಿಚಾರದಲ್ಲಿ ಅನ್ನದಾನಿ ಶೂನ್ಯತೆ – ಬಿ.ಎಸ್.ರಾಮಚಂದ್ರು

ಮಳವಳ್ಳಿ ಶಾಸಕ ಡಾ.ಅನ್ನದಾನಿಯವರಿಂದ ತಾಲ್ಲೂಕಿನಲ್ಲಿ ಯಾವುದೇ ನಿರೀಕ್ಷಿತ ಅಭಿವೃದ್ಧಿಗಳು ಸಾಗದೇ, ತಾಲ್ಲೂಕು ಅಭಿವೃದ್ಧಿ ಶೂನ್ಯತೆಯಿಂದ ಬಳಲುತ್ತಿದೆ ಎಂದು ಜಿ.ಪಂ. ಮಾಜಿ ಅಧ್ಯಕ್ಷ ಬಿ.ಎಸ್.ರಾಮಚಂದ್ರು ತಿಳಿಸಿದರು.

ಮಂಡ್ಯದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ ಸರ್ಕಾರದಲ್ಲಿ ಶಾಸಕರಾಗಿದ್ದ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರವಧಿಯಲ್ಲಿ ಮಂಜೂರಾಗಿದ್ದ 593 ಕೋಟಿ ರೂ. ವೆಚ್ಚದ ಬಿ.ಜಿ.ಪುರ ವ್ಯಾಪ್ತಿಯ ಹನಿ ನೀರಾವರಿ ಯೋಜನೆಯನ್ನು ಕಳೆದ 5 ವರ್ಷಗಳಲ್ಲಿ ಪೂರ್ಣಗೊಳಿಸುವಲ್ಲಿ ಶಾಸಕ ಅನ್ನದಾನಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಕಿರುಗಾವಲು ಹೋಬಳಿಯ 46 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ 44 ಕೋಟಿ ರೂ. ಯೋಜನೆ ಕುಂಠಿತಗೊಂಡಿದ್ದು, ಈ ಯೋಜನೆ ಬಗೆಯೂ ನಿರಾಸಕ್ತಿ ತೋರಿರುವ ಶಾಸಕ ಅನ್ನದಾನಿಯವರಿಂದ ತಾಲೂಕಿನ ಅಭಿವೃದ್ಧಿ ಸಾಧ್ಯವಿಲ್ಲ ಎಂಬುದನ್ನು ಮನಗಂಡು ನನ್ನ 10 ವರ್ಷಗಳ ಅವಧಿಯ ಜೆಡಿಎಸ್ ಪಕ್ಷದ ಬಾಂಧವ್ಯವನ್ನು ಬಿಟ್ಟು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು.

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಣ್ಣ ನೀರಾವರಿ ಸಚಿವರಾಗಿ ಜಿಲ್ಲೆಯವರೇ ಆದ ಸಿ.ಎಸ್.ಪುಟ್ಟರಾಜು ಕಾರ್ಯನಿರ್ವಹಿಸಿದ್ದರು. ಆ ವೇಳೆ ಮೇಲುಕೋಟೆ ಕ್ಷೇತ್ರಕ್ಕೆ ಮಂಜೂರಾಗಿದ್ದ ಯೋಜನೆಗಳನ್ನು ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗಿದೆ. ಆದರೆ, ಶಾಸಕ ಅನ್ನದಾನಿಯವರು ಯಾವುದೇ ನೀರಾವರಿ ಯೋಜನೆಯನ್ನು ಮಂಜೂರು ಮಾಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ವ್ಯಾಪ್ತಿಯ ಬಿರೋಟ್, ಮಾಸ್ಟರ್ ದೊಡ್ಡಿ, ಮರೀಗೌಡನದೊಡ್ಡಿ, ಕರೀಗೌಡನದೊಡ್ಡಿ ಮುಂತಾದ ಗ್ರಾಮಗಳ ಕಾಡಂಚಿನ ಜನರಿಗೆ ಕಾವೇರಿ ನದಿಯಿಂದ ಕಿರುಕಟ್ಟೆ ನಿರ್ಮಿಸಿ ಕುಡಿಯುವ ನೀರು ಪೂರೈಸುವ ಯೋಜನೆ ರೂಪಿಸಲು ಮುಂದಾಗಲಿಲ್ಲ. ನನ್ನ ಸ್ವಗ್ರಾಮ ಭೀಮನಹಳ್ಳಿ ಸರ್ಕಾರಿ ಶಾಲೆಯನ್ನು ದತ್ತು ಪಡೆಯಲು ಮಾಡಿಕೊಂಡ ಮನವಿಗೆ ಆಸಕ್ತಿ ತೋರದ ಶಾಸಕರಿಂದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮನಗಂಡು ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಇತರೆ ಹಿಂದುಗಳಿದ ವರ್ಗಗಳ ಜಿಲ್ಲಾಧ್ಯಕ್ಷ ಸಾತನೂರು ಕೃಷ್ಣ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ