Wednesday, November 18, 2026

ಪ್ರಾಯೋಗಿಕ ಆವೃತ್ತಿ

ರಘು ಆಚಾರ್‌ಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿರುವುದು ಖಂಡನೀಯ

ಹಿಂದುಳಿದ ವರ್ಗದ, ಅತಿಸಣ್ಣ ಸಮುದಾಯವಾದ ವಿಶ್ವಕರ್ಮ ಜನಾಂಗದ ರಘು ಆಚಾರ್‌ರವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿರುವುದು ಖಂಡನೀಯ ಎಂದು ಅಖಿಲ ಕರ್ನಾಟಕ ರಘು ಆಚಾರ್ ಅಭಿಮಾನಿಗಳ ಸಂಘದ ಸತೀಶ್ ಆಕ್ರೋಶ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,ರಘು ಆಚಾರ್ ರವರು ಸತತ ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಭ್ರಷ್ಟಾಚಾರ ರಹಿತ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿ, ಎಲ್ಲಾ ಸಮುದಾಯದ ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ, ಕಾಂಗ್ರೆಸ್ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಆದರೂ ಕಾಂಗ್ರೆಸ್ ಪಕ್ಷ ರಘು ಆಚಾರ್‌ರವರು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರು ಎಂಬ ಒಂದೇ ಕಾರಣದಿಂದ ಟಿಕೆಟ್ ನಿರಾಕರಿಸಿರುವುದು ವಿಶ್ವಕರ್ಮ ಸಮಾಜದ ಜನರ ನಂಬಿಕೆಗೆ ದ್ರೋಹ ಎಸಗಿದಂತಾಗಿದೆ ಎಂದರು.

ರಘು ಆಚಾರ್ ಅವರಿಗೆ ಟಿಕೆಟ್ ನಿರಾಕರಿಸಿರುವುದರಿಂದ ವಿಶ್ವಕರ್ಮ ಸಮುದಾಯದ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದು,ಮುಂಬರುವ ಚುನಾವಣೆಯಲ್ಲಿ ಎಲ್ಲಾ 224 ಮತ ಕ್ಷೇತ್ರಗಳಲ್ಲಿ ನಮ್ಮ ಸಮಾಜದ ಶಕ್ತಿ ಏನೆಂಬುದನ್ನು ತೋರಿಸಲು ಕಾಂಗ್ರೆಸ್ ಪಕ್ಷವನ್ನು ವಿಶ್ವಕರ್ಮ ಸಮಾಜ ಬಹಿಷ್ಕರಿಸುವ ನಿರ್ಣಯ ಕೈಗೊಳ್ಳಲಿದೆ ಎಂದರು.

ಗೋಷ್ಟಿಯಲ್ಲಿ ಸಂಘದ ಅಧ್ಯಕ್ಷ ದೋರನಹಳ್ಳಿ ಮಹೇಶ್,ಮುಖಂಡರಾದ ನಿಂಗಾಚಾರ್,ಮಹೇಶ್, ಶಿವು,ಯೋಗೇಶ್,ಪ್ರತಾಪ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ