ಯಡಿಯೂರಪ್ಪ – ಔಟ್
ಹಾಲಾಡಿ ಶ್ರೀನಿವಾಸ ಶೆಟ್ಟಿ- ಔಟ್
ಈಶ್ವರಪ್ಪ – ಔಟ್
ಜಗದೀಶ್ ಶೆಟ್ಟರ್ – ಔಟ್?
ಸಾವಿರ ತಲೆ ತೆಗೆದಾದರೂ ಸರಿ ಪ್ರಹ್ಲಾದ್ ಜೋಷಿ, ಬಿ ಎಲ್ ಸಂತೋಷರಿಗೆ ಜಾಗ ಮಾಡಿಕೊಡಲು ಅಮಿತ್ ಶಾ ತಯಾರಾಗಿದ್ದಾರೆ. ಸಂತೋಷ ಕೂಟದ ಆಟಕ್ಕೆ ಬಿಜೆಪಿಯ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕರು ಹೀನಾಯ ಅವಮಾನ ಎದುರಿಸಿ ಹೊರನಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ!
ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ..
ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ.
— Karnataka Congress (@INCKarnataka) April 11, 2023
“>
ಮೊ-ಶಾ ಜೋಡಿಯ ಮಸಲತ್ತು ನೋಡಿದರೆ ಬೊಮ್ಮಾಯಿಯವರೂ ರಾಜಕೀಯ ನಿವೃತ್ತಿ ಘೋಷಿಸಿದರೆ ಯಾವುದೇ ಆಶ್ಚರ್ಯವಿಲ್ಲ! ಜೋಶಿ, ಸಂತೋಷರನ್ನು ಪ್ರತಿಷ್ಠಾಪಿಸಲು ಹವಣಿಸುತ್ತಿರುವ ಬೊಮ್ಮಾಯಿಯವರು ಅದೆಷ್ಟೇ ನಾಗಪುರದ ನೌಕರರು ಎನಿಸಿಕೊಂಡರೂ RSSಗೆ ಅಪಥ್ಯವೇ.. ಯಡಿಯೂರಪ್ಪರಂತೆ ಬೊಮ್ಮಾಯಿಯವರ ರಾಜಕೀಯ ಬದುಕೂ ದುರಂತ ಅಂತ್ಯ ಕಾಣಲಿದೆ ಎಂದು ಕಾಂಗ್ರೆಸ್ ಭವಿಷ್ಯ ನುಡಿದಿದೆ.
ಯಡಿಯೂರಪ್ಪನವರನ್ನುಕಣ್ಣೀರು ಹಾಕಿಸಿ ಪದಚ್ಯುತಿ ಮಾಡಲಾಯ್ತು. ಮಾಡಿದ್ದುಣ್ಣೋ ಮಹಾರಾಯ ಎಂಬಂತೆ ಈಶ್ವರಪ್ಪನವರ ರಾಜಕೀಯವನ್ನೇ ಮುಗಿಸಿಯಾಯ್ತು. ಜಗದೀಶ್ ಶೆಟ್ಟರ್ ಕಾಲವೂ ಸನ್ನಿಹಿತ. ಅಲ್ಲಿಗೆ ಬಿಜೆಪಿಯಲ್ಲಿ ಲಿಂಗಾಯತ ಹಾಗೂ ಹಿಂದುಳಿದ ವರ್ಗದ ನಾಯಕತ್ವವನ್ನು ಕಿತ್ತು ನಾಗಪುರದ ನೌಕರರಾದ ಜೋಶಿ ಹಾಗೂ ಸಂತೋಷ ಕೂಟ ಆಪೋಷನ ತೆಗೆದುಕೊಂಡಾಯ್ತು! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.




