Thursday, November 19, 2026

ಪ್ರಾಯೋಗಿಕ ಆವೃತ್ತಿ

ಹೊಸ ಮತದಾರರ ಸೇರ್ಪಡೆ ಹೆಸರಲ್ಲಿ ಚುನಾವಣಾಧಿಕಾರಿಗಳಿಂದಲೇ ಅಕ್ರಮ : ಡಿ.ಕೆ.ಶಿವಕುಮಾರ್

ಚುನಾವಣಾಧಿಕಾರಿಗಳು ಹೊಸ ಮತದಾರರ ಸೇರ್ಪಡೆ ಅಭಿಯಾನದ ಹೆಸರಲ್ಲಿ ಈ ಅಕ್ರಮ ಮಾಡಿದ್ದಾರೆ. ಬೆಂಗಳೂರಿನ ಎಲ್ಲ ಕ್ಷೇತ್ರಗಳಲ್ಲಿ ಈ ಅಕ್ರಮ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಈ ಅಕ್ರಮ ವಿಚಾರವಾಗಿ ನಾವೇ ತನಿಖೆ ಮಾಡಿದ್ದೇವೆ. ಯಾರೆಲ್ಲಾ 2 ಮತಗಳನ್ನು ಹೊಂದಿದ್ದಾರೋ, ಅದಕ್ಕೆ ಕುಮ್ಮಕ್ಕು ನೀಡಿರುವ ಅಧಿಕಾರಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

“>

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದೇವಪುರ ಕ್ಷೇತ್ರದಲ್ಲಿ ಒಂದು ಮತವನ್ನು 2-3 ಕಡೆ ಅಕ್ರಮವಾಗಿ ಸೇರಿಸಲಾಗಿದೆ. ಹೆಸರು, ತಂದೆ ಹೆಸರು ಎಲ್ಲಾ ಒಂದೇ ಆಗಿದ್ದು, ಮತದದಾರರ ಫೋಟೋ ಮಾತ್ರ ಬೇರೆ ಬೇರೆ. ನಮ್ಮ ಬಳಿ 42,222 ಅಕ್ರಮ ಹೆಸರು ಸೇರಿಸಿರುವ ದಾಖಲೆ ಇವೆ ಎಂದು ತಿಳಿಸಿದ್ದಾರೆ. ಈ ಮಾಹಿತಿಯನ್ನು ಕರ್ನಾಟಕ ಕಾಂಗ್ರೆಸ್ ನಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ