ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಹೆಬ್ಬಕವಾಡಿ ಮಲ್ಲೇಗೌಡ ಗುರುವಾರ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣಾ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಸಿಬಿ ಪಕ್ಷಗಳಿಗೆ ಅಂದರೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿಗಳಿಗೆ ಪರ್ಯಾಯವಾಗಿ ಕೆ.ಆರ್.ಎಸ್ ಪಕ್ಷವು ಅಸ್ತಿತ್ವಕ್ಕೆ ಬಂದಿದೆ. ಭ್ರಷ್ಟಾಚಾರ ಮುಕ್ತ ಪಾರದರ್ಶಕ ರಾಜಕಾರಣಕ್ಕಾಗಿ ನಮ್ಮ ಪಕ್ಷವನ್ನು ಬೆಂಬಲಿಸಬೇಕು. ಈ ಬಾರಿ ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗದೇ ಯೋಗ್ಯರಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರಿರಂಗಪಟ್ಟಣ ತಾಲೂಕು ಅಧ್ಯಕ್ಷ ಪ್ರೇಮ್ ಕುಮಾರ್, ತಾಲೂಕು ಸಂಘಟನಾ ಕಾರ್ಯದರ್ಶಿಗಳಾದ ಮಲ್ಲೇಶ, ಸುನೀಲ್ ಕುಮಾರ್ ಎ, ಕೊತ್ತತ್ತಿ ಹೋಬಳಿ ಅಧ್ಯಕ್ಷ ರಾಮಕೃಷ್ಣ ಎಸ್, ಉಪಾಧ್ಯಕ್ಷ ರವೀಂದ್ರ, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.




