Thursday, November 19, 2026

ಪ್ರಾಯೋಗಿಕ ಆವೃತ್ತಿ

ಉದಯ್ ಗೆ ಮದ್ದೂರು ‘ಕೈ’ ಟಿಕೆಟ್ : ಗುರುಚರಣ್ ಬೆಂಬಲಿಗರ ಆಕ್ರೋಶ – ಪ್ರತಿಭಟನೆ

ವರದಿ : ವಿ.ಎಸ್.ಪ್ರಭು‌

ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಗುರುಚರಣ್ ಗುಂಪಿನ ಕಾಂಗ್ರೆಸ್ ಕಾರ್ಯಕರ್ತರು ಮದ್ದೂರು ಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ (ಸರ್ವಿಸ್ ರಸ್ತೆ) ತಡೆದು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಮದ್ದೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಾಕಿದ್ದ ಕಾಂಗ್ರೆಸ್ ಪಕ್ಷದ ಫೆಕ್ಸ್ ಗಳನ್ನು ಹರಿದು ಹಾಕಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದು, ಬೆಂಕಿ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ, ಫ್ಲೆಕ್ಸ್ ಗಳನ್ನು ಹರಿದು ಹಾಕಿದರು.

ಪುರಸಭಾ ಸದಸ್ಯೆ ಪ್ರಿಯಾಂಕ ಅಪ್ಪುಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಹಲವಾರು ವರ್ಷಗಳಿಂದ ಸಂಘಟನೆ ಮಾಡಿಕೊಂಡು ಬರುತ್ತಿದ್ದ ಕೆಪಿಸಿಸಿ ಸದಸ್ಯ ಗುರುಚರಣ್ ರವರಿಗೆ ಟಿಕೆಟ್ ನೀಡದೆ ಬೇರೆಯವರಿಗೆ ಟಿಕೆಟ್ ಮಾರಾಟ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವರ್ಷದ ಹಿಂದೆಯೇ ಗುರುಚರಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ಎಂದು ಘೋಷಣೆ ಮಾಡಿ, ಇದೀಗ ಕಾಂಗ್ರೆಸ್ ಟಿಕೆಟ್ ಅನ್ನು ಅಧಿಕ ಹಣಕ್ಕೆ ಮಾರಾಟ ಮಾಡಿರುವುದು ನಿಜಕ್ಕೂ ಅವಮಾನಕರ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ ಮಾತನಾಡಿ, ಗುರುಚರಣ್ ಅವರು ಮಾಜಿ ಮುಖ್ಯಮಂತ್ರಿ ಎಸ್.ಎಂ‌. ಕೃಷ್ಣರವರ ಸಹೋದರನ ಪುತ್ರನಾಗಿದ್ದು, ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವರಿಗೆ ಟಿಕೆಟ್ ನೀಡದೆ ಬೆನ್ನಿಗೆ ಚೂರಿ ಹಾಕುವ ಮೂಲಕ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತರಿಗೆ ಅನ್ಯಾಯವಸಗಿದ್ದಾರೆ‌. ಈ ರೀತಿ ಆದರೆ ಕಾಂಗ್ರೆಸ್ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ನಿರ್ನಾಮವಾಗಲಿದೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುರುಚರಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ‌.ಕೃಷ್ಣ ಅವರಿಗೆ ಗುರು ದ್ರೋಹ ಮಾಡಿದ್ದಾರೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕೆಪಿಸಿಸಿ ಸದಸ್ಯ ಗುರುಚರಣ್ ಅಧ್ಯಕ್ಷತೆಯಲ್ಲಿ ಸಭೆ ಕರೆದು ಮುಂದಿನ ತೀರ್ಮಾನದ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಮುಖಂಡರಾದ ಅಪ್ಪುಗೌಡ, ರಾಘವ, ಗೋಪಿ, ಅರುಣ್, ರಾಘು, ರವಿ, ಕುಮಾರ್, ಪಾರ್ಥ ಸೇರಿದಂತೆ ಹಲವರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ