Friday, November 20, 2026

ಪ್ರಾಯೋಗಿಕ ಆವೃತ್ತಿ

ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಪೂರಕ ವಾತಾವರಣ : ಕದಲೂರು ಉದಯ್

ವರದಿ : ಪ್ರಭು ವಿ.ಎಸ್. 

ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೋಡೆತ್ತುಗಳಾಗಿ ಪಕ್ಷ ಸಂಘಟನೆಗೆ ಮುಂದಾಗುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆಂದು ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ್ ತಿಳಿಸಿದರು.

ಮದ್ದೂರು ಪಟ್ಟಣದ ಶಿವಪುರದಲ್ಲಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ವೇಳೆ ಮಾತನಾಡಿದ ಅವರು ರಾಜ್ಯಾದ್ಯಂತ ಪಕ್ಷವನ್ನು ಸಂಘಟಿಸಲು ಇಬ್ಬರು ನಾಯಕರು ಹಗಲಿರುಳು ಶ್ರಮಿಸುತ್ತಿದ್ದು ಇವರಿಗೆ ಮತ್ತಷ್ಟು ಶಕ್ತಿ ತುಂಬುವಂತಹ ಕೆಲಸವಾಗಬೇಕೆಂದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಂತರ ಕಳೆದ ವರ್ಷಗಳಿಂದಲೂ ಕಾಂಗ್ರೆಸ್ ಶಾಸಕರಿಲ್ಲದೆ ಕಾರ್ಯಕರ್ತರಿಗೆ ನೋವುಂಟಾಗಿದ್ದು ಅಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇಬ್ಬರು ಶಾಸಕರನ್ನು ಆಯ್ಕೆ ಮಾಡುವ ಮೂಲಕ ಶಕ್ತಿ ತುಂಬಿದ್ದು ಇವರೂ ಸಹ ಕ್ಷೇತ್ರ ಮತ್ತು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆಂದರು.

ಸಮಾಜ ಸೇವೆಗೆಂದು ಆಗಮಿಸಿದ ತಮ್ಮನ್ನು ಕ್ಷೇತ್ರದ ಜನ ಸ್ವೀಕರಿಸುವ ಜತೆಗೆ ಕಾಂಗ್ರೆಸ್ ಪಕ್ಷದ ಸ್ಥಳೀಯ ಜಿಲ್ಲಾ ಮತ್ತು ರಾಜ್ಯಟಮ್ಟದ ನಾಯಕರು ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿ ಆಶೀರ್ವದಿಸಿದ್ದು ಮುಂದಿನ ದಿನಗಳಲ್ಲಿ ಮತದಾರರು ತಮ್ಮ ಕೈ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ದಿನೇಶ್‌ಗೂಳೀಗೌಡ ಮಾತನಾಡಿ ಮುಂಬರುವ ವಿಧಾಸಭಾ ಚುನಾವಣೆ ವೇಳೆ ಮಂಡ್ಯ ಜಿಲ್ಲೆಯ ಜೆಡಿಎಸ್ ಅಭ್ಯರ್ಥಿಗಳು ಮತ ಕೇಳುವ ಯಾವುದೇ ನೈತಿಕತೆ ಹೊಂದಿಲ್ಲವೆಂದರು.

ಜಿಲ್ಲೆಯ ಜಲ್ವಂತ ಸಮಸ್ಯೆಗಳಿಗೆ ಧನಿ ಎತ್ತದ ಜಾದಳ ಶಾಸಕರು ಎಲ್ಲಾ ಕ್ಷೇತ್ರದಲ್ಲಿಯೂ ವಿಫಲರಾಗಿದ್ದು ಅಭಿವೃದ್ಧಿ ಶೂನ್ಯವೆಂದ ಅವರು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದು ಡಬಲ್ ಎಂಜಿನ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿರುವುದಾಗಿ ದೂರಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ಧು ಭೇಟಿಯಾಗಿ ಮೈಷುಗರ್ ಕಾರ್ಖಾನೆಗೆ ವಿಶೇಷ ಅನುದಾನ, ಜಿಲ್ಲೆಯಲ್ಲಿ ಭತ್ತ ಮತ್ತು ರಾಗಿ ಖರೀದಿ ಕೇಂದ್ರಗಳ ಸ್ಥಾಪನೆ, ಮನ್‌ಮುಲ್ ವತಿಯಿಂದ ಹಾಲಿಗೆ ವಿಶೇಷ ಪ್ರೋತ್ಸಾಹಧನ ಮತ್ತು ಕಳೆದ ಸಾಲಿನ ನೆರೆ ಸಂತ್ರಸ್ತರಿಗೆ ಜಿಲ್ಲೆಗೆ ಒಂದು ಕೋಟಿ ಅನುದಾನ ಕುರಿತಾಗಿ ಶಾಸಕ ಮಧು.ಜಿ.ಮಾದೇಗೌಡರೊಟ್ಟಿಗೆ ಸಲ್ಲಿಸಿದ ಮನವಿಯನ್ನು ಪುರಸ್ಕರಿಸಿದ್ದಾಗಿ ವಿವರಿಸಿದರು.

ಮುಂದಿನ ವಿಧಾನಸಭಾ ಚುನಾವಣೆ ವೇಳೆ ಮದ್ದೂರು ಕ್ಷೇತ್ರ ಕಾಂಗ್ರೆಸ್ ಪಕ್ಷದ ವಶವಾಗಲಿದ್ದು ಪಕ್ಷದ ಒಮ್ಮತದ ಅಭ್ಯರ್ಥಿ ಕೆ.ಎಂ. ಉದಯ್ ಅವರು ಗೆಲ್ಲುವ ಮೂಲಕ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ತಮ್ಮೊಟ್ಟಿಗೆ ಮಧು.ಜಿ.ಮಾದೇಗೌಡ ಸೇರಿದಂತೆ ಮೂರು ಮಂದಿಯೂ ಶ್ರಮಿಸುವುದಾಗಿ ಭರವಸೆ ನೀಡಿದರು.

ಶಾಸಕ ಮಧು.ಜಿ.ಮಾದೇಗೌಡ ಮಾತನಾಡಿ ಕಳೆದ 20 ವರ್ಷಗಳಿಂದ ಸ್ಥಳೀಯವಾಗಿ ಕಾಂಗ್ರೆಸ್ ಶಾಸಕರಿಲ್ಲದೆ ಕಾರ್ಯಕರ್ತರು ಬಳಲಿದ್ದು ತಾವು ಸ್ಪರ್ಧಿಸಿ ಸೋತ ಅಂತರದಷ್ಟೆ ಹೆಚ್ಚಿನ ಮತಪಡೆದು ಎದುರಾಳಿ ಅಭ್ಯರ್ಥಿಗಳನ್ನು ಪರಾಭಾವಗೊಳಿಸುವ ಪಣ ತೊಟ್ಟಿದ್ದು ಕಾರ್ಯಕರ್ತರು ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡದಂತೆ ಮನವಿ ಮಾಡಿದರು.

ನಾಮಪತ್ರ ಸಲ್ಲಿಕೆ 
ಮಾಜಿ ಶಾಸಕ ಬಿ.ರಾಮಕೃಷ್ಣ ಮಾತನಾಡಿ ಏ.19ರ ಬುಧವಾರ ಕಾಂಗ್ರೆಸ್ ಪಕ್ಷದ ಸರ್ವಾನುಮತದ ಅಭ್ಯರ್ಥಿಯಾಗಿ ಕೆ.ಎಂ. ಉದಯ್ ನಾಮಪತ್ರ ಸಲ್ಲಿಸಲಿದ್ದು ಪಕ್ಷದ ಎಲ್ಲಾ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಭಾಗವಹಿಸುವಂತೆ ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಗಂಗಾಧರ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಸಿ. ಬಸವರಾಜು, ಮಾಜಿ ಉಪಾಧ್ಯಕ್ಷ ಇಮ್ತಿಯಾಜ್ ಉಲ್ಲಾಖಾನ್, ಮುಖಂಡ ಅಜ್ಜಹಳ್ಳಿ ರಾಮಕೃಷ್ಣ, ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದೇಶಹಳ್ಳಿ ಆರ್.ಮೋಹನ್‌ಕುಮಾರ್, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.

ಕೆಪಿಸಿಸಿ ಸದಸ್ಯ ಕದಲೂರು ರಾಮಕೃಷ್ಣ, ಗೆಜ್ಜಲಗೆರೆ ಗ್ರಾ.ಪಂ. ಅಧ್ಯಕ್ಷ ಹರೀಶ್, ಬೆಸಗರಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಶೇಖರ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಶ್, ಕೆಸ್ತೂರು ರಾಜಣ್ಣ, ವಿನಯ್‌ರಾಮಕೃಷ್ಣ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ