ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಇಂಡುವಾಳು ಎಸ್.ಸಚ್ಚಿದಾನಂದ ಸೋಮವಾರ ಉಮೇದುವಾರಿಕೆ ಸಲ್ಲಿಸಿದರು.

ಸೋಮವಾರ ತಮ್ಮ ಅಪಾರ ಬೆಂಬಲಿಗರರೊಂದಿಗೆ ಶ್ರೀರಂಗಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಸಚ್ಚಿದಾನಂದ ನಂತರ ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಚಿತ್ರ ನಟ ದರ್ಶನ್ ಅವರು ಕೂಡ ಭಾಗಿಯಾಗಿದ್ದರು, ಜನರ ನಡುವೆ ಡಿ ಬಾಸ್ ಡಿ ಬಾಸ್ ಎಂದು ಯುವಕರ ಹರ್ಷೋದ್ಗಾರ ಕೇಳಿ ಬರುತ್ತಿತ್ತು.




