Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ ಕ್ಷೇತ್ರದ ಬದಲಾವಣೆಗಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ : ಹೆಬ್ಬಣಿ ಬಸವರಾಜು

ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಹಲವು ಜನಪರ ಯೋಜನೆಗಳ ಮೂಲಕ ಜನ ಮನ್ನಣೆಯನ್ನು ಗಳಿಸಿದ್ದು, ಮಳವಳ್ಳಿ ಕ್ಷೇತ್ರದ ಬದಲಾವಣೆಗಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಬ್ಬಣಿ ಬಸವರಾಜು ಮನವಿ ಮಾಡಿದರು.

ತಾಲ್ಲೂಕಿನ ಕೋಡಿಪುರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಜಿ. ಮುನಿರಾಜು ಅವರ ಪರ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಾಸಕರಾಗಿದ್ದವರು ಕ್ಷೇತ್ರವನ್ನು ಅಭಿವೃದ್ದಿ ಪಡಿಸುವಲ್ಲಿ ವಿಫಲರಾಗಿದ್ದು, ದುರಾಢಳಿತದಿಂದ ಬೇಸತ್ತಿರುವ ಮತದಾರರು ಬಿಜೆಪಿ ಕಡೆಗೆ ಮುಖ ಮಾಡಿದ್ದಾರೆ. ಜನರ ನೆಮ್ಮದಿಗಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸಬೇಕೆಂದು ಕೋರಿದರು.

ಬಿಜೆಪಿ ತಾಲ್ಲೂಕು ಪ್ರಧಾನಕಾರ್ಯದರ್ಶಿ ಕೆ.ಸಿ ನಾಗೇಗೌಡ ಮಾತನಾಡಿ, ಡಬಲ್ ಎಂಜಿನ್ ಸರ್ಕಾರದ ಜನಪರ ಕೆಲಸಗಳನ್ನು ಗಮನಿಸಿ ಮತಹಾಬೇಕು, ಇನ್ನಷ್ಟು ಸೇವೆ ಮಾಡಲು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಮುನಿರಾಜು ಅವರನ್ನು ಗೆಲ್ಲಿಸಬೇಕೆಂದು ಕೋರಿದರು.

ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಮನೆ ಮನೆಗೂ ತೆರಳಿ ಬಿಜೆಪಿ ಸಾಧನೆ ಬಗ್ಗೆ ಮತದಾರರಿಗೆ ಮನವರಿಕೆ ಮಾಡಬೇಕು, ಪ್ರತಿ ಬೂತ್‌ನಲ್ಲಿ ಬಿಜೆಪಿ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳೇ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಪಕ್ಷ ಸಂಘಟನೆಗೆ ಮುಂದಾಗಬೇಕು, ಕಾಂಗ್ರೆಸ್, ಜೆಡಿಎಸ್ ಆಡಳಿತವನ್ನು ನೋಡಿರುವ ಮತದಾರರು ಬಿಜೆಪಿ ಅಭ್ಯರ್ಥಿಗೂ ಒಂದು ಭಾರಿ ಅವಕಾಶ ಕೊಟ್ಟು ಸೇವೆ ಸಲ್ಲಿಸುವ ಅವಕಾಶ ಮಾಡಿಕೊಡಬೇಕು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷವೇ ಅಧಿಕಾರ ಹಿಡಿಯುವುದರಿಂದ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಅವಕಾಶ ಇರುವುದರಿಂದ ಬಿಜೆಪಿ ಪಕ್ಷಕ್ಕೆ ಮತ ನೀಡಬೇಕೆಂದು ಮನವಿ ಮಾಡಿದರು.

ಕೋಡಿಪುರ, ದಬ್ಬಹಳ್ಳಿ, ಆಗಸನಪುರ, ಕೆಂಬುತಗೆರೆ ಸಾಹಳ್ಳಿ ಸೇರಿದಂತೆ ವಿವಿಧ ಗ್ರಾಮದಗಳಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಮುನಿರಾಜು ಪರವಾಗಿ ಮತಯಾಚನೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮುಖಂಡರಾದ ರವಿ, ಸಿದ್ದರಾಜು, ಅಧ್ಯಕ್ಷರಾದ ರವಿ ಜಯರಾಮೇಗೌಡ, ಕೆಂಪೇಗೌಡ, ಹರೀಶ್ ಪಾಟಿಲ್ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ