Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ | ನಾಳೆ ಪಿ.ಎಂ.ನರೇಂದ್ರಸ್ವಾಮಿ ನಾಮಪತ್ರ ಸಲ್ಲಿಕೆ

ಮಳವಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.19ರ ಬುಧವಾರ ಅಪಾರ ಬೆಂಬಲಿಗರೊಂದಿಗೆ ಮಳವಳ್ಳಿ ಪಟ್ಟಣದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಮಂಡ್ಯದದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಿಗ್ಗೆ 10 ಗಂಟೆ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವಿರುವುದರಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

ಕಾಂಗ್ರೆಸ್ ಸೇರಿದ ಸುಧಾ ಚಂದ್ರಶೇಖರ್

ಮಳವಳ್ಳಿ ಕ್ಷೇತ್ರದಲ್ಲಿ ಪಿ.ಎಂ.ನರೇಂದ್ರಸ್ವಾಮಿ ಅವರು ಮಾಡಿರುವ ಅಭಿವೃದ್ಧಿಯನ್ನು ಗಮನಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುಧಾ ಚಂದ್ರಶೇಖರ್ ಹೇಳಿದರು.

ಈ ಹಿಂದೆ ನರೇಂದ್ರಸ್ವಾಮಿ ಅವರು ಶಾಸಕರಾಗಿದ್ದಾಗ ಅಭಿವೃದ್ದಿಗೆ ಒತ್ತು ನೀಡಿದ್ದಾರೆ. ಬಿ.ಜಿ. ಪುರ ಹನಿ ನೀರಾವರಿ ಯೋಜನೆಯನ್ನು ಅವರು ಮಂಜೂರು ಮಾಡಿಸಿದರು. ಆದರೆ ಈಗಿನ ಶಾಸಕ ಅನ್ನದಾನಿಯವರ ನಿರ್ಲಕ್ಷ್ಯದಿಂದಾಗಿ ಆ ಯೋಜನೆ ನೆನೆಗುದಿಗೆ ಬಿದ್ದಿದೆ. ಆದ್ದರಿಂದ ಅಭಿವೃದ್ದಿ ದೃಷ್ಠಿಯಿಂದ ಮಳವಳ್ಳಿ ಕ್ಷೇತ್ರದಲ್ಲಿ ಸುಮಾರು 35 ಸಾವಿರ ಲಿಂಗಾಯತ ಸಮುದಾಯದ ಮತದಾರರು ನರೇಂದ್ರಸ್ವಾಮಿಯರನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸುಧಾ ಚಂದ್ರಶೇಖರ್ ಅವರ ಪತಿ ಚಂದಶೇಖರ್ ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ