Friday, November 20, 2026

ಪ್ರಾಯೋಗಿಕ ಆವೃತ್ತಿ

ಚುನಾವಣೆ ಪೂರ್ವ ಸಮೀಕ್ಷೆ 2.0 | 122 ರಿಂದ 131 ಸ್ಥಾನಗಳಿಗೆ ಜಿಗಿದ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ

ಕರ್ನಾಟಕ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತ ದಾಖಲಿಸಲಿದೆ ಎಂದು ಕರ್ನಾಟಕ ಚುನಾವಣೆ ಪೂರ್ವ ಸಮೀಕ್ಷೆ 2.0 ಮಾಹಿತಿಯನ್ನು ಹೊರ ಹಾಕಿದೆ.

ಕಳೆದ ಫೆಬ್ರವರಿಗೆ ಹೋಲಿಸಿದರೆ ಮಾರ್ಚ್ ನಲ್ಲಿ ರಾಜ್ಯದ ಮತದಾರರು ಕಾಂಗ್ರೆಸ್ ಪರ ಹೆಚ್ಚು ಒಲವು ವ್ಯಕ್ತಪಡಿಸಿದ್ದಾರೆಂದು ಸಮೀಕ್ಷೆ ಹೇಳಿದೆ.

“>

ಫೆಬ್ರವರಿಯಲ್ಲಿ ನಡೆದ ಮೊದಲ ಸಮೀಕ್ಷೆಯಲ್ಲಿ ರಾಜ್ಯದ 224 ಸ್ಥಾನಗಳಲ್ಲಿ ಕಾಂಗ್ರೆಸ್ 116ರಿಂದ 122 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ಅಂಶ ವ್ಯಕ್ತವಾಗಿತ್ತು. ಆದರೆ ಇದೀಗ ಮಾರ್ಚ್ ನಲ್ಲಿ ನಡೆದ ಸಮೀಕ್ಷೆ 2.0 ದಲ್ಲಿ ಕಾಂಗ್ರೆಸ್ ಇನ್ನಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ. ಈಗಿನ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 128 ರಿಂದ 131 ಸ್ಥಾನಗಳಲ್ಲಿ ಗೆಲುವು ಕಂಡು ಇನ್ನಷ್ಟು ಸ್ಥಾನಗಳನ್ನು ಬಾಚಿಕೊಳ್ಳಲಿದೆ ಎಂದು ತಿಳಿದು ಬಂದಿದೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆಯನ್ನು ಎಳೆದಿದ್ದು, ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿರುವುದನ್ನು ಕಂಡು ರಾಜ್ಯದ ಮತದಾರರು ಕಾಂಗ್ರೆಸ್ ಕಡೆ ಹೆಚ್ಚಿನ ಒಲವು ವ್ಯಕ್ತಪಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಈವರೆಗೆ ಬಂದ ಬಹುತೇಕ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಸಮೀಕ್ಷೆಯೂ ಕೂಡ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎನ್ನುತ್ತಿದೆ. ಭ್ರಷ್ಟಾಚಾರ, ಕೋಮುವಾದದಿಂದ ಬೇಸತ್ತಿರುವ ಕರ್ನಾಟಕದ ಜನತೆಗೆ ಕಾಂಗ್ರೆಸ್ ಪಕ್ಷವೇ ಆಪ್ತವಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ನಲ್ಲಿ ಸಮೀಕ್ಷೆಯ ಮಾಹಿತಿಯನ್ನು ಹಂಚಿಕೊಂಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ