ನುಡಿ ಕರ್ನಾಟಕ ಬ್ರೇಕಿಂಗ್ ನ್ಯೂಸ್…
ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಗುರುಚರಣ್ ನಾಳೆ ಹೆಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಮದ್ದೂರು ಕ್ಷೇತ್ರದ ‘ಕೈ’ ಟಿಕೆಟ್ ನ ಪ್ರಬಲ ಆಕಾಂಕ್ಷಿಯಾಗಿದ್ದ ಗುರುಚರಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ತಪ್ಪಿತ್ತು. ಇದೇ ಕ್ಷೇತ್ರದ ಮತ್ತೊಬ್ಬ ಪ್ರಬಲ ಮುಖಂಡ ಕದಲೂರು ಉದಯ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತು.
ಮದ್ದೂರು ‘ಕೈ’ ಟಿಕೆಟ್ ಗಾಗಿ ತೀವ್ರ ಪೈಪೋಟಿ ಎದುರಾಗಿದ್ದರಿಂದ ಮೊದಲ 2 ಪಟ್ಟಿಗಳಲ್ಲೂ ಕಾಂಗ್ರೆಸ್ ಪಕ್ಷವು ಮದ್ದೂರಿನ ಟಿಕೆಟ್ ಅನ್ನು ಘೋಷಣೆ ಮಾಡದೇ ವಿಳಂಬ ತಂತ್ರವನ್ನು ಅನುಸರಿಸಿತ್ತು. ಆದರೆ 3 ನೇ ಪಟ್ಟಿಯಲ್ಲಿ ಉದಯ್ ಗೆ ಟಿಕೆಟ್ ಘೋಷಣೆ ಮಾಡಿತ್ತು.
ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಅವರು ಸಹೋದರ ನ ಮಗನಾಗಿರುವ ಗುರುಚರಣ್ ಬಹಳ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷದಲ್ಲೇ ಗುರುತಿಸಿಕೊಂಡಿದ್ದರು. ಉತ್ತಮ ಕೌಟುಂಬಿಕ ಹಿನ್ನೆಲೆ ಹಾಗೂ ಪಕ್ಷದಲ್ಲಿ ಸಾಕಷ್ಟು ಹಿರಿತನ ಹೊಂದಿದ್ದರೂ ಇತ್ತೀಚೆಗೆ ಪಕ್ಷ ಸೇರ್ಪಡೆಯಾದ ಕದಲೂರು ಉದಯ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದರಿಂದ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ.




