ಮಳವಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಪಿ.ಎಂ. ನರೇಂದ್ರಸ್ವಾಮಿ ಜನ ಸಾಗರದ ನಡುವೆ ಮೆರವಣಿಗೆಯಲ್ಲಿ ಬಂದು ಚುನಾವಣಾಧಿಕಾರಿಗೆ ನಾಮ ಪತ್ರ ಸಲ್ಲಿಸಿದರು.
ಇಂದು ಬೆಳಿಗ್ಗೆ ಪಟ್ಟಣದ ಕೋಟೆ ಬೀದಿಯಲ್ಲಿರುವ ಶ್ರೀ ಗಂಗಾಧರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಕಾಳಮ್ಮ ದೇವಾಲಯದ ರಸ್ತೆಯ ಬೀದಿಯಲ್ಲಿ ಹೊರಟು ಡಾ. ರಾಜಕುಮಾರ್ ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ರಸ್ತೆಗೆ ಹೊಂದಿಕೊಂಡಿರುವ ಅನಂತ ರಾಮ್ ಸರ್ಕಲ್ ನಲ್ಲಿ ಕಾಂಗ್ರೆಸ್ ಬೆಂಬಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿಮ್ಮೆಲ್ಲರ ಸಹಕಾರ ಬೇಕು ಎಂದು ಕ್ಷೇತ್ರದ ಮತದಾರರಿಗೆ ಮನವಿ ಮಾಡಿದರು .

ಅಪಾರ ಸಂಖ್ಯೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರ ಶಕ್ತಿ ಪ್ರದರ್ಶನದೊಂದಿಗೆ ದಾರಿಯುದ್ದಕ್ಕೂ ಮತಯಾಚಿಸಿದರು.ಮೆರವಣಿಗೆಯಲ್ಲಿದ್ದ ಸಾವಿರಾರು ಕಾರ್ಯಕರ್ತರು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್,ಚಲುವರಾಯ ಸ್ವಾಮಿ,ನರೇಂದ್ರ ಸ್ವಾಮಿ ಅವರಿಗೆ ಜೈಕಾರ ಕೂಗಿದರು.
ಬಳಿಕ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮಲ್ಲಿಕಾರ್ಜುನ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ನರೇಂದ್ರಸ್ವಾಮಿ ಪತ್ನಿ ಶಶಿಕಲಾ, ಮಾಜಿ ಸಚಿವ ಚಲುವರಾಯಸ್ವಾಮಿ ಉಪಸ್ಥಿತರಿದ್ದರು.

ಮಾಜಿ ಸಚಿವ ಚಲುವರಾಯ ಸ್ವಾಮಿ ಮಾತನಾಡಿ,ಮಳವಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಪಿ.ಎಂ.ನರೇಂದ್ರಸ್ವಾಮಿ ಸಾಕಷ್ಟು ಕೊಡುಗೆ ನೀಡಿದ್ದಾರೆ.ಕಳೆದ ಐದು ವರ್ಷಗಳಲ್ಲಿ ಈ ಕ್ಷೇತ್ರದಲ್ಲಿಯಾವುದೇ ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲ.ಮಳವಳ್ಳಿ ಸಮಗ್ರ ಅಭಿವೃದ್ಧಿಗೆ ನಿಮ್ಮ ಮನೆ ಮಗ ನರೇಂದ್ರಸ್ವಾಮಿ ಅವರನ್ನು ಗೆಲ್ಲಿಸಿ ಕೊಡಿ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಗೂಳಿಗೌಡ,ಮಧು ಮಾದೇಗೌಡ,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ದಡದಪುರ ಶಿವಣ್ಣ, ಮಳವಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು ಚಿಕ್ಕೆಬಾಗಿಲು ವೇದಮೂರ್ತಿ ತಾ.ಪಂ ಮಾಜಿ ಅಧ್ಯಕ್ಷರಾದ ನಾಗೇಶ್, ವಿಶ್ವಾಸ್, ಸುಂದ್ರೇಶ್, ಪುರಸಭೆ ಸದಸ್ಯರಾದ ಶಿವಸ್ವಾಮಿ ಎಸ್ಸಿ/ಎಸ್ಟಿ ಅಧ್ಯಕ್ಷರಾದ ಶಿವರಾಜು, ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ, ವಡ್ಡರಹಳ್ಳಿ ಶ್ರೀಕಾಂತ್, ನಿಡಘಟ್ಟ ಪ್ರದೀಪ್,ಬಾಚನಹಳ್ಳಿ ಅಭಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.




