Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ| ಎನ್. ಚಲುವರಾಯಸ್ವಾಮಿ ನಮಗೆ ಪ್ರತಿಸ್ಪರ್ಧಿ- ಬಿಜೆಪಿ ಅಭ್ಯರ್ಥಿ ಆಟಕ್ಕುಂಟು ಲೆಕ್ಕಕ್ಕಿಲ್ಲ

ವರದಿ : ಪ್ರಭು ವಿ.ಎಸ್.

ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎನ್. ಚಲುವರಾಯಸ್ವಾಮಿ ಅವರೆ ನಮಗೆ ಪ್ರತಿಸ್ಪರ್ಧಿಯಾಗಿದ್ದು ಬಿಜೆಪಿ ಅಭ್ಯರ್ಥಿ ಆಟಕ್ಕುಂಟು ಲೆಕ್ಕಕ್ಕಿಲ್ಲವೆಂಬ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಶಾಸಕ ಸುರೇಶ್‌ಗೌಡ ತಿಳಿಸಿದರು.

ಮದ್ದೂರು ತಾಲೂಕಿನ ನಾಗಮಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ ಹೋಬಳಿಯ ಚನ್ನಮ್ಮನಕೊಪ್ಪಲು ಗ್ರಾಮದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವು ಭದ್ರವಾಗಿದ್ದು ಇದನ್ನು ಯಾರಿಂದಲೂ ಅಲುಗಾಡಿಸಲು ಸಾಧ್ಯವಿಲ್ಲವೆಂದ ಅವರು ತಮಗೆ ನೇರ ಹಣಾಹಣಿ ಕಾಂಗ್ರೆಸ್ ಪಕ್ಷವೇ ಹೊರತು ಬೇರೆ ಯಾವುದೇ ಪಕ್ಷ ನಮಗೆ ಪ್ರತಿಸ್ಪರ್ಧಿಯಲ್ಲವೆಂದರು.

ಎಚ್.ಡಿ. ಕುಮಾರಸ್ವಾಮಿ ಅವರು ಜಾರಿಗೆ ತಂದಿರುವ ಪಂಚರತ್ನ ಯೋಜನೆ ಮತ್ತು ತಮ್ಮ ಅಭಿವೃದ್ಧಿ ಕಾರ್ಯಗಳನ್ನು ಮುಂದಿಟ್ಟುಕೊಂಡು ತಾವು ಕ್ಷೇತ್ರದ ಜನರ ಬಳಿ ಮತಬಿಕ್ಷೆ ಕೇಳುತ್ತಿದ್ದು ಪ್ರಸಕ್ತ ಚುನಾವಣೆಯಲ್ಲಿ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೆ ಬರಲಿರುವ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಸಮರ್ಥ ಕಾರ್ಯಕರ್ತರಿದ್ದು ಮೇ.13ರಂದು ನಮ್ಮ ಶಕ್ತಿ ಏನೆಂಬುದು ಗೊತ್ತಾಗಲಿದ್ದು ವಿರೋಧ ಪಕ್ಷದವರ ಕುತಂತ್ರದಿಂದಾಗಿ ಹಲವಾರು ಊಹಾಪೋಹಗಳು ಹರಿದಾಡುತ್ತಿದ್ದು ಪ್ರತಿ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಹಗಲಿರುಳು ಶ್ರಮಿಸುತ್ತಿದ್ದು ಇಂತಹ ಕುತಂತ್ರ ಹೇಳಿಕೆಗಳಿಗೆ ಯಾರೊಬ್ಬರು ಕಿವಿಗೊಡಬಾರದೆಂದು ಮನವಿ ಮಾಡಿದರು.

ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಮಾತನಾಡಿ ರೈತಾಪ್ತಿ ಹಾಗೂ ಗ್ರಾಮೀಣ ಜನರ ಬದುಕಿಗೆ ಆಸರೆಯಾಗಿರುವ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸುವAತೆ ಮತ್ತು ಹಲವಾರು ಅಭಿವೃಧ್ಧಿ ಕಾರ್ಯಗಳನ್ನು ಕೈಗೊಂಡಿರುವ ಶಾಸಕ ಸುರೇಶ್‌ಗೌಡ ಅವರು ಮರು ಆಯ್ಕೆ ಬಯಸಿ ಸ್ಪರ್ಧೆಗಿಳಿದಿದ್ದು ಕ್ಷೇತ್ರದ ಮತದಾರರು ಬೆಂಬಲಿಸುವಂತೆ ಕೋರಿದರು.

ನೀರಾವರಿ, ಶಿಕ್ಷಣ, ಆರೋಗ್ಯ, ಉದ್ಯೋಗ ಇನ್ನಿತರ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಶ್ರಮಿಸಿದ್ದು ರಾಜ್ಯದ ಜನರು ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಹವಣಿಸುತ್ತಿರುವುದಾಗಿ ಹೇಳಿದರು.

ತಾಲೂಕಿನ ಹರಳಕೆರೆ, ಚನ್ನಮ್ಮನಕೊಪ್ಪಲು, ಮೂಡ್ಯ, ಗೂಳೂರುದೊಡ್ಡಿ, ಉಪಾರಕೊಪ್ಪಲು, ಚೊಟ್ಟನಹಳ್ಳಿ, ಅರಗಿನಮೆಳೆ, ಬಿದರಕೋಟೆ ಇನ್ನಿತರೆ ಗ್ರಾಮಗಳಲ್ಲಿ ಬಿರುಸಿನ ಮತಪ್ರಚಾರ ಕೈಗೊಂಡರು.

ಈ ವೇಳೆ ಗ್ರಾ.ಪಂ. ಸದಸ್ಯ ಹರಳಕೆರೆ ಚಂದ್ರು, ತಾ.ಪಂ. ಮಾಜಿ ಅಧ್ಯಕ್ಷೆ ಲಕ್ಷಿö್ಮಚನ್ನರಾಜು, ಮುಖಂಡರಾದ ಪುಟ್ಟೇಗೌಡ, ಕೃಷ್ಣಪ್ಪ, ಮಹಾಲಿಂಗು, ಸಿದ್ದಲಿಂಗು, ಬೋರಯ್ಯ, ಭೈರಪ್ಪ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ