Wednesday, November 18, 2026

ಪ್ರಾಯೋಗಿಕ ಆವೃತ್ತಿ

ಹಕ್ಕಿಪಿಕ್ಕಿ ಜನಾಂಗದವರಿಗೆ ಮತದಾನದ ಮಹತ್ವ ಕುರಿತ ಜಾಗೃತಿ

ಸಾರ್ವಜನಿಕರು ಹಾಗೂ ಯುವ ಜನತೆ ಸೇರಿದಂತೆ ಎಲ್ಲರೂ ಪ್ರಜಾಪ್ರಭುತ್ವದ ಭದ್ರ ಬುನಾದಿಗಾಗಿ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಮತದಾನ ಮಹತ್ವ ಅರಿತು ತಪ್ಪದೇ ಹಕ್ಕು ಚಲಾಯಿಸಬೇಕೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಚನ್ನಹಳ್ಳಿ ಬೋರೆ ಗ್ರಾಮದ ಹೊರ ವಲಯದಲ್ಲಿ ಬಿಡು ಬಿಟ್ಟಿರುವ ಹಕ್ಕಿ ಪಿಕ್ಕಿ ಜನಾಂಗದವರಿಗೆ ಶ್ರೀರಂಗಪಟ್ಟಣ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಮಹದೇವಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಸಿದ “ಮತದಾನದ ಜಾಗೃತಿ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯನ್ನು ಎಲ್ಲಾ ಹಬ್ಬಗಳನ್ನು ಆಚರಿಸುವಂತೆ ಪ್ರಜಾಪ್ರಭುತ್ವದ ಹಬ್ಬವನ್ನು ವಿಭಿನ್ನ ರೀತಿಯಲ್ಲಿ ಆಚರಣೆ ಮಾಡಬೇಕು ಯುವ ಸಮೂಹ ಸೇರಿದಂತೆ ಪ್ರತಿಯೊಬ್ಬರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಬೇಕು, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ ವಾಗಿದ್ದು, ಹಾಗಾಗಿ ಮತದಾನ ಮಾಡಿ, ಪ್ರಜಾ ಪ್ರಭುತ್ವ ಗಟ್ಟಿಗೊಳಿಸಿ ಎಂದು ಸಲಹೆ ನೀಡಿದರು.

ಮತದಾನದ ಜಾಗೃತಿಯ ವಿವಿಧ ಸಂದೇಶ ಫಲಕಗಳೊಂದಿಗೆ ಜಾಗೃತಿ ಮೂಡಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.  ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎನ್ ಕೃಷ್ಣೇಗೌಡ, ಹಕ್ಕಿ ಪಿಕ್ಕಿ ಜನಾಂಗದ ಮುಖಂಡರಾದ ವೆಂಕಟೇಶ ದೊರೆ, ಭಾಷಾ, ಬಾಬು ಹಳ್ಳಿ , ಕ್ರಾಂತಿ ಕುಮಾರ್, ವೀರನ್ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ