Wednesday, November 18, 2026

ಪ್ರಾಯೋಗಿಕ ಆವೃತ್ತಿ

ಹೆಚ್.ಡಿ.ದೇವೇಗೌಡರಿಂದ ಚುಂಚನಗಿರಿಯಲ್ಲಿ ಅಮಾವಾಸ್ಯೆ ಪೂಜೆ

ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಗುರುವಾರ ಆಗಮಿಸಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ವಿಶೇಷ ಅಮಾವಾಸೆ ಪೂಜೆ ಸಲ್ಲಿಸಿದರು.

ಪ್ರತಿ ತಿಂಗಳು ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆಯುವ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ದೇವೇಗೌಡರಿಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀನಿರ್ಮಲಾನಂದನಾಥಸ್ವಾಮೀಜಿ ಅವರು ಶಾಲು ಹೊದಿಸಿ, ಫಲತಾಂಬೂಲ ನೀಡಿ ಗೌರವಿಸಿದರು.

ಪೂಜೆಯಲ್ಲಿ ಪಾಲ್ಗೊಂಡ ದೇವೇಗೌಡರು ದೇವರ ದರ್ಶನ ಪಡೆದು, ತೀರ್ಥ ಪ್ರಸಾದ ಸ್ವೀಕರಿಸಿ, ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ನಾಗಮಂಗಲ ಶಾಸಕ ಸುರೇಶ್ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ