ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಇಂದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಸ್.ಜೆ.ಅಶೋಕ್ ಜಯರಾಮ್ ಜನ ಸಾಗರದ ನಡುವೆ ಮಂಡ್ಯ ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದ ಅವರು,ಮೆರವಣಿಗೆಯಲ್ಲಿ ಬಂದು ತಾಲ್ಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಅಶ್ವತ್ ನಾರಾಯಣ್, ಸಂಸದೆ ಸುಮಲತಾ ಅಂಬರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಜಿಲ್ಲಾ ಪ್ರಭಾರಿಗಳಾದ ಜಗದೀಶ್ ಹಿರೇಮನಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
ಮೆರವಣಿಗೆಯಲ್ಲಿದ್ದ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ, ನಡ್ಡಾ, ಅಶ್ವಥ್ ನಾರಾಯಣ್, ಸುಮಲತಾ ಅಂಬರೀಶ್ ಅವರಿಗೆ ಜೈಕಾರ ಹಾಕಿದರು.
ಬಿಜೆಪಿ ಕಾರ್ಯಕರ್ತರು ಸಚಿವ ಅಶ್ವಥ್ ನಾರಾಯಣ್,ಸಂಸದೆ ಸುಮಲತಾ ಅಂಬರೀಶ್, ಅಶೋಕ್ ಜಯರಾಮ್ ಅವರಿಗೆ ಪುಷ್ಪ ವೃಷ್ಟಿಗರೆದು, ಬೃಹತ್ ಗಾತ್ರದ ಸೇಬಿನ ಹಾರ ಹಾಕಿ ಸಂಭ್ರಮಿಸಿದರು.
ಮೆರವಣಿಗೆಯಲ್ಲಿ ತಮಟೆ,ನಗಾರಿ ಮೊದಲಾದ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.