Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ರಾಜ್ಯ ಮಟ್ಟದ ರ್‍ಯಾಂಕಿಂಗ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್

ಮಂಡ್ಯನಗರದ ಪಿಇಟಿ ಒಳಾಂಗಣ ಕ್ರೀಡಾಂಗಣದಲ್ಲಿ ಏ.25ರಿಂದ ಏ.28ರಿಂದ ರಾಜ್ಯಮಟ್ಟದ ರಾಂಕಿಂಗ್ ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಆಯೋಜಿಸಲಾಗಿದೆ ಎಂದು ರಾಮನಗರ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಖಜಾಂಚಿ ಪ್ರಸನ್ನ ಕುಮಾರ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 19 ವರ್ಷದ ಒಳಗಿನವರ ಹಾಗೂ ಸೀನಿಯರ್ ವಿಭಾಗದ ಹುಡುಗರು ಹಾಗೂ ಹುಡುಗಿಯರ ಮತ್ತು ಪುರುಷರ ಹಾಗೂ ಮಹಿಳೆಯರ, ಈ ಪಂದ್ಯಾವಳಿಗಳಿಗೆ ಸರಿ ಸುಮಾರು 350ಕ್ಕೂ ಹೆಚ್ಚು ಕ್ರೀಡಾಪಟುಗಳು ರಾಜ್ಯದಾದ್ಯಂತ ಪಾಲ್ಗೊಳ್ಳಲಿದ್ದಾರೆ ಎಂದರು.

ರಾಮನಗರ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಮಂಡ್ಯ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಹಕಾರದೊಂದಿಗೆ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.

ಏ.29 ಹಾಗೂ 30ರಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ CISC ಸ್ಪೋರ್ಟ್ ಕಾಂಪ್ಲೆಕ್ಸ್ ನಲ್ಲಿ ಸೆಮಿ ಫೈನಲ್ ಹಾಗೂ ಫೈನಲ್ ಪಂದ್ಯಾವಳಿಗಳು ನಡೆಯಲಿವೆ. ಈ ಕ್ರೀಡಾಕೂಟದ ಬಹುಮಾನದ ಮೊತ್ತ ಸರಿ ಸುಮಾರು 2 ಲಕ್ಷಕ್ಕೂ ಹೆಚ್ಚು ಈ ಪಂದ್ಯಾವಳಿಗಳಲ್ಲಿ ಮೊದಲ ಎರಡು ದಿನ ಆರ್ಹತಾ ಸುತ್ತು ನಡೆಯಲಿವೆ. ಮೈನ್ ಡ್ರಾ ಪಂದ್ಯಾವಳಿಗಳು ನಡೆಯಲಿವೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ರಾಮನಗರ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಕಾರ್ಯದರ್ಶಿ ಮಹೇಶ್, ಮಂಡ್ಯ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಮನೋಹರ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ