ರಾಜ್ಯ ಬಿಜೆಪಿ ಸರ್ಕಾರ ಮುಸ್ಲಿಂ ಮೀಸಲಾತಿ 2ಬಿಯನ್ನು ರದ್ದುಗೊಳಿಸಿ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಈ ಕುರಿತು ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅವರ ನೇತೃತ್ವದ ಪೀಠ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಿದೆ. ಅಲ್ಲದೇ ಮೇ.9ರವರೆಗೆ ಮಾರ್ಪಡಿಸಿರುವ ಮೀಸಲಾತಿಯನ್ನು ಜಾರಿಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಸುಪ್ರೀಂ ಕೋರ್ಟ್ನ ಈ ತಡೆಯಾಜ್ಞೆಯಿಂದ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಹೆಚ್ಚುವರಿಯಾಗಿ ನೀಡಲಾಗಿದ್ದ ಮೀಸಲಾತಿ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ. ಏಕೆಂದರೆ ಸರಿಯಾಗಿ ಒಂದು ತಿಂಗಳ ಹಿಂದೆ (ಮಾ.24) ರಂದು ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆ ನಡೆಸಿತು.
ಪ್ರಮುಖವಾಗಿ ಪ್ರಬಲ ಎರಡು ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರಿಗೆ ಮೀಸಲಾತಿ ನೀಡುವ ವಿಚಾರವಾಗಿ ಚರ್ಚೆ ನಡೆಸಿ, ಒಕ್ಕಲಿಗರು ಮತ್ತು ಲಿಂಗಾಯತರಿಗೆ ತಲಾ ಶೇ 2ರಂತೆ ಸಮವಾಗಿ ಮೀಸಲಾತಿಯನನ್ಉ ಹಂಚಲಾಗಿತ್ತು. ನಂತರ ಮುಸ್ಲಿಮರನ್ನು ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಿ, 2ಬಿಯನ್ನು ರದ್ದುಗೊಳಿಸಿತ್ತು.




