Thursday, November 19, 2026

ಪ್ರಾಯೋಗಿಕ ಆವೃತ್ತಿ

ಏ.29ಕ್ಕೆ ಪುಸ್ತಕಗಳ ಬಿಡುಗಡೆ ಸಮಾರಂಭ

ಮಂಡ್ಯದ ಕರ್ನಾಟಕ ಸಂಘದ ವತಿಯಿಂದ ಏ.29ರಂದು ಸಂಜೆ 4 ಗಂಟೆಗೆ ಮಂಡ್ಯನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಪುಸ್ತಕಗಳ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಸಂಘದ ಚಂದಗಾಲು ಲೋಕೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋ‍ಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಿದ್ದ ಸಾಹಿತಿ ಡಾ.ರಾಗೌ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಪುಸ್ತಕಗಳನ್ನು ಬಿಡುಗಡೆ ಮಾಡುವರು ಎಂದು ವಿವರಿಸಿದರು.

ಪ್ರೊ. ಜಯಪ್ರಕಾಶಗೌಡ ‘ವ್ಯಕ್ತಿಚಿತ್ರ ವಿಹಾರ’ ಹಾಗೂ ಡಾ.ಕೆಂಪಮ್ಮ ಕಾರ್ಕಹಳ್ಳಿ ಅವರ ಮಂಡ್ಯ ಜಿಲ್ಲೆಯ ‘ಜಾನಪದ -ಯಕ್ಷಗಾನ ಅವಲೋಕನ ಕುರಿತು ಸಾಹಿತಿ ಡಾ.ಮ.ರಾಮಕೃಷ್ಣ ಮತನಾಡುವರು ಎಂದರು.

ಗೋಷ್ಠಿಯಲ್ಲಿ ಕರ್ನಾಟಕ ಸಂಘದ ಸೋಮಶೇಖರ್ ಹೆಚ್.ಟಿ, ಕೋಣನಹಳ್ಳಿ ಜಯರಾಮ್, ನಿವೃತ್ತ ಪ್ರಾಧ್ಯಾಪಕ ಎಚ್. ಎಸ್.ಮುದ್ದೇಗೌಡ, ನಾಗಪ್ಪ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ