Thursday, November 19, 2026

ಪ್ರಾಯೋಗಿಕ ಆವೃತ್ತಿ

ಬಿಜೆಪಿಯ ಗೂಂಡಾಗಿರಿಗೆ ತಕ್ಕ ಪಾಠ ಕಲಿಸಬೇಕಿದೆ : ಕಾಂಗ್ರೆಸ್

ಕರ್ನಾಟಕದ ಜನತೆಗೆ ಚುನಾವಣೆಯ ಈ ಸಂದರ್ಭದಲ್ಲಿ ಕಾಂಗ್ರೆಸ್ ಭರವಸೆಗಳ ಗ್ಯಾರಂಟಿ ನೀಡಿದರೆ ಬಿಜೆಪಿ ಪಕ್ಷವು ಬೆದರಿಕೆಗಳನ್ನು ಒಡ್ಡುತ್ತಿದೆ. ವ್ಯತ್ಯಾಸ ಸ್ಪಷ್ಟವಾಗಿದೆ. ಕಾಂಗ್ರೆಸ್ ಪಕ್ಷದಿಂದ ಅಭಿವೃದ್ಧಿ ಮತ್ತು ಬಿಜೆಪಿಯಿಂದ ಗೂಂಡಾಗಿರಿ. ಕರ್ನಾಟಕದ ಪ್ರಜ್ಞಾವಂತ ಜನತೆ ಬಿಜೆಪಿಯ ಗೂಂಡಾಗಿರಿಗೆ ತಕ್ಕ ಪಾಠ ಕಲಿಸಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

“>

ಮೈಸೂರನ್ನು ಪ್ಯಾರಿಸ್ ಮಾಡುತ್ತೇನೆ ಎಂದಿದ್ದ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಟೀಕಿಸಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಈಡೇರಿಸಲಾಗದಿದ್ದರೆ ಸರ್ಕಾರ ವಿಸರ್ಜಿಸುತ್ತೇವೆ ಎಂಬ ವಾಗ್ದಾನ ಮಾಡುತ್ತೇವೆ. 20 ಲಕ್ಷ ಕೋಟಿ ಪ್ಯಾಕೆಜ್ ಬಿಳಿ ಕಾಗೆ ಹಾರಿಸಿದ ಅವರು ಯಾವ ರೀತಿ ಪ್ರಾಯಶ್ಚಿತ್ತ ಮಾಡಿಕೊಳ್ಳುತ್ತಾರೆ ಹೇಳಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ನರೇಂದ್ರ ಮೋದಿ ಅವರೇ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನೀಡಿದ್ದ 261 ಭರವಸೆಗಳೆಲ್ಲವನ್ನೂ ಈಡೇರಿಸಿದ ಇತಿಹಾಸ ಹೊಂದಿದೆ. ಹಾಗೆಯೇ ಬಿಜೆಪಿ ಸರ್ಕಾರ 90% ಭರವಸೆಗಳನ್ನು ವಂಚಿಸಿದೆ. ನಿಮಗೆ ತಾಕತ್ತಿದ್ದರೆ ಕಳೆದ ಬಾರಿ ತಮ್ಮ ಪಕ್ಷ ನೀಡಿದ್ದ ಭರವಸೆಗಳ ಬಗ್ಗೆ ಮಾತಾಡಿ. ಈ 40% ಭ್ರಷ್ಟ ಬಿಜೆಪಿ ಸರ್ಕಾರ ಕರ್ನಾಟಕ ರಾಜ್ಯವನ್ನು ಎಲ್ಲಾ ರೀತಿಯಿಂದಲೂ ಲೂಟಿ ಮಾಡಿದೆ. ಅಷ್ಟೇ ಅಲ್ಲ, ಹಗರಣಗಳ ಆರೋಪ ಹೊತ್ತಿರುವ ಜನರನ್ನು ದೇಶದಿಂದ ಓಡಿಹೋಗಲು ಬಿಜೆಪಿ ಸರ್ಕಾರ ಸಹಾಯ ಮಾಡುತ್ತದೆ. ಭ್ರಷ್ಟರನ್ನು ರಕ್ಷಿಸುವ ಕಾರ್ಯದಲ್ಲಿ ಸ್ವತಃ ಪ್ರಧಾನಿಯೇ ತೊಡಗಿಸಿಕೊಂಡಿದ್ದಾರೆ! ಎಂದು ಕಾಂಗ್ರೆಸ್ ಕೆಂಡಕಾರಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ