ಕನ್ನಡದ ಹಿರಿಯ ನಟ ಶಿವರಾಜ್ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ಕುಮಾರ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗೀತಾ ಶಿವರಾಜ್ಕುಮಾರ್ ಅವರು ಕಾಂಗ್ರೆಸ್ಗೆ ಸೇರಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ಪುತ್ರಿಯಾಗಿರುವ ಗೀತಾ ಅವರು, ಈ ಹಿಂದೆ ಜೆಡಿಎಸ್ನಿಂದ ಲೋಕಸಭಾ ಚುನಾವಣೆಗೆ ಬಿ.ಎಸ್.ಯಡಿಯೂರಪ್ಪನವರ ಎದುರಾಳಿಯಾಗಿ ಸ್ಪರ್ಧಿಸಿದ್ದರು. ಆದರೆ, ಯಡಿಯೂರಪ್ಪ ಅವರ ಎದುರು ಸೋತಿದ್ದರು.
2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಪಡೆದು ಗೀತಾ ಶಿವರಾಜ್ಕುಮಾರ್ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. 2008ರಲ್ಲಿ ಜೆಡಿಎಸ್ನಿಂದ ಗೀತಾ ಅವರು ಸ್ಪರ್ಧಿಸಿದ್ದರು.
ಬಂಗಾರಪ್ಪ ಅವರ ಐವರು ಮಕ್ಕಳಲ್ಲಿ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ ಮತ್ತು ಗೀತಾ ಶಿವರಾಜ್ಕುಮಾರ್ ಅವರು ರಾಜಕೀಯ ಜೀವನದಲ್ಲಿದ್ದಾರೆ. ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷದಲ್ಲಿ, ಕುಮಾರ್ ಬಂಗಾರಪ್ಪ ಬಿಜೆಪಿಯಲ್ಲಿದ್ದು, ಈ ಬಾರಿ ಸೊರಬ ವಿಧಾನಸಭಾ ಚುನಾವಣೆಯಲ್ಲಿ ಪರಸ್ಪರ ಸೆಣಸಲಿದ್ದಾರೆ.
2021ರ ಜುಲೈನಲ್ಲಿ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಇದೀಗ ಗೀತಾ ಶಿವರಾಜ್ಕುಮಾರ್ ಸಹ ಕಾಂಗ್ರೆಸ್ ಸೇರಿದ್ದಾರೆ.
“ಗೀತಾ ಶಿವರಾಜ್ಕುಮಾರ್ ಅವರು ಕಾಂಗ್ರೆಸ್ಗೆ ಬಂದಿದ್ದಾರೆ ಎಂದುಕೊಳ್ಳಿ” ಎಂದು ಈ ಹಿಂದೆಯೇ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು. ಇದೀಗ ಅಧಿಕೃತವಾಗಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷವನ್ನು ಗೀತಾ ಅವರು ಸೇರ್ಪಡೆಯಾಗಿದ್ದಾರೆ.