Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಚಲಿಸುವ ರೈಲಿಗೆ ಸಿಲುಕಿ ತುಂಡರಿಸಲ್ಪಟ್ಟ ಎರಡೂ ಕಾಲುಗಳು

ಮಂಡ್ಯ ತಾಲ್ಲೂಕಿನ ಹನಕೆರೆ ರೈಲು ನಿಲ್ದಾಣದಲ್ಲಿ ಚಲಿಸುವ ರೈಲಿಗೆ ಸಿಲುಕಿ ಯುವತಿಯ ಎರಡೂ ಕಾಲುಗಳು ತುಂಡರಿಸಲ್ಪಟ್ಟ ಘಟನೆ ಇಂದು ಬೆಳಿಗ್ಗೆ 11.45 ರ ಸುಮಾರಿಗೆ ಸಂಭವಿಸಿದೆ.

ಗದಗ ಜಿಲ್ಲೆಯ ಶಿರಹಟ್ಟಿ ನಿವಾಸಿ ಅನ್ನಪೂರ್ಣ(21) ಎಂಬಾಕೆಯೇ ಎರಡೂ ಕಾಲುಗಳನ್ನು ಕಳೆದುಕೊಂಡ ಯುವತಿ.

ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಮೆಮೊ ರೈಲು ಶನಿವಾರ ಬೆಳಗ್ಗೆ 11.45ರ ಸಮಯದಲ್ಲಿ ರೈಲು ನಿಲ್ದಾಣಕ್ಕೆ ಆಗಮಿಸಿದೆ.

ಆ ವೇಳೆ ಇನ್ನೂ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಅನ್ನಪೂರ್ಣ ಅವರು ಪ್ರಯತ್ನಿಸಿದಾಗ ಆಯತಪ್ಪಿ ಬಿದ್ದಿದ್ದಾರೆ. ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ ಅನ್ನಪೂರ್ಣ ಅವರ ಎರಡೂ ಕಾಲುಗಳ ಮೇಲೆ ಚಕ್ರ ಹರಿದು ತುಂಡರಿಸಿವೆ.

ಅನ್ನಪೂರ್ಣ ಅವರ ಜೊತೆಗಿದ್ದ ಸಂಬಂಧಿ ಯುವಕ ಮತ್ತು ಸ್ಥಳೀಯರು ಆಕೆಯನ್ನು ರಕ್ಷಿಸುವ ಪ್ರಯತ್ನ ಮಾಡಿದರೂ ಸಫಲವಾಗಿಲ್ಲ.

ತೀವ್ರ ಗಾಯಗೊಂಡು ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿರುವ ಅನ್ನಪೂರ್ಣ ಅವರನ್ನು ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ರೈಲ್ವೆ ಹೊರ ಉಪ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮೈಸೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ