ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಪ್ರಚಾರದ ಸಂಬಂಧ ಮಂಗಳವಾರ (ಮೇ.02) ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಸಂಚಾರ ಮಾಡುತ್ತಿದ್ದಾಗ ಹೊಸಕೋಟೆ ಬಳಿ ರಣ ಹದ್ದು ಹೆಲಿಕಾಪ್ಟರ್ಗೆ ಡಿಕ್ಕಿ ಹೊಡೆದಿದೆ.
ಈ ವೇಳೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದ್ದು, ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.

ಡಿ.ಕೆ. ಶಿವಕುಮಾರ್ ಅವರು ಸುರಕ್ಷಿತವಾಗಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.




