Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | 30 ಸಾವಿರ ಮತಗಳ ಅಂತರದಲ್ಲಿ ಗಣಿಗ ರವಿಕುಮಾರ್ ಗೆಲುವು- ಜಮೀರ್ ಅಹಮದ್ ಖಾನ್

ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಅವರು 30 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆಂದು ಕಾಂಗ್ರೆಸ್ ನಾಯಕ, ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದ ಕಾಳಿಕಾಂಭ ಸಮುದಾಯ ಭವನದಲ್ಲಿ ಬುಧವಾರ ನಡೆದ ಅಲ್ಪಸಂಖ್ಯಾತರ ವಿಭಾಗದ ಕಾಂಗ್ರೆಸ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ 2013 ರಿಂದ 2018 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಕಾರ್ಯಕ್ರಮಗಳು ಇನ್ನೂ ಜನರ ಮನಸ್ಸಿನಲ್ಲಿದೆ. ನಾಡಿನ ಜನತೆ ಬಿಜೆಪಿಗೆ ಅಧಿಕಾರ ನೀಡಿದ್ದಕ್ಕಾಗಿ ಪಶ್ಷಾತಾಪ ಪಡುತ್ತಿದ್ದಾರೆ. ನಾನು ಇದುವರೆಗೆ ಸುಮಾರು 79 ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ್ದೇನೆ, ಎಲ್ಲಾ ಕಡೆ ಕಾಂಗ್ರೆಸ್ ಪರವಾದ ಅಲೆ ಇದೆ. ಆದ್ದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ದ ಎಂದರು.

ಇದುವರೆಗಿನ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿಲ್ಲ, ಅವರೆನಿದ್ದರೂ ಆಪರೇಷನ್ ಕಮಲ ಮಾಡಿ, ಶಾಸಕರನ್ನು ಖರೀದಿಸಿ ಸರ್ಕಾರ ರಚಿಸಿ, ರಾಜ್ಯದ ಜನರ ಹಣವನ್ನು ಲೂಟಿ ಮಾಡಿದ್ದಾರೆ. ಅವರು ರಾಜ್ಯದಲ್ಲಿ ಎಂದಿಗೂ ಸ್ವಂತ ಬಲದ ಮೇಲೆ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದರು.

ಜಮೀರ್ ಡಿಸಿಎಂ ಆಗುವುದನ್ನು ನೋಡಲು ಬೆಂಬಲಿಸಿ 
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ, ಆದ್ದರಿಂದ ಜಮೀರ್ ಅಹಮದ್ ಖಾನ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಲು ಸಮುದಾಯದ ಜನರು ತಮ್ಮನ್ನು ಬೆಂಬಲಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ರವಿಕುಮಾರ್ ಮನವಿ ಮಾಡಿದರು.

ವೇದಿಕೆಯಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮುಖಂಡರಾದ ರುದ್ರಪ್ಪ, ಜಬೀವುಲ್ಲಾ, ಎಂ.ಎಸ್.ಚಿದಂಬರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ