Thursday, November 19, 2026

ಪ್ರಾಯೋಗಿಕ ಆವೃತ್ತಿ

ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬೆಂಕಿ – ಮೊತ್ತೊಂದು ಅಪಾಯದಿಂದ ಪಾರಾದ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿಯಾಗಿ ಅಪಾಯದಿಂದ ಪಾರಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ  ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ.

ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.

ಮಂಗಳವಾರ ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಹೆಲಿಕಾಪ್ಟರ್​ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು. ಅದೃಷ್ಟವಶಾತ್​ ಹೆಲಿಕಾಪ್ಟರ್​ನಲ್ಲಿದ್ದವರಿಗೆ ಯಾವುದೇ ಹಾನಿಯಾಗಿರಲಿಲ್ಲ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ