Wednesday, November 18, 2026

ಪ್ರಾಯೋಗಿಕ ಆವೃತ್ತಿ

ಪತ್ರಕರ್ತರ-ಮುದ್ರಣಕಾರರ ಸಂಘದ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಆಯ್ಕೆ

ಮಂಡ್ಯ ಜಿಲ್ಲಾ ಪತ್ರಕರ್ತರ ಮತ್ತು ಮುದ್ರಣಕಾರರ ವಿವಿದೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಂಡ್ಯದ ರೂವಾರಿ ಪ್ರಾದೇಶಿಕ ದಿನಪತ್ರಿಕೆ ಸಂಪಾದಕ ಎಸ್.ನಾರಾಯಣಸ್ವಾಮಿ ಅವರು ಅವಿರೋಧವಾಗಿ ಆಯ್ಕೆಯಾದರು.

ಹಿಂದಿನ ಅಧ್ಯಕ್ಷರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಂಘದ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಚುನಾವಣೆಯಲ್ಲಿ ಯಾರೊಬ್ಬರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಎಸ್.ನಾರಾಯಣಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಬಳಿಕ ನೂತನ ಅಧ್ಯಕ್ಷ ಎಸ್.ನಾರಾಯಸ್ವಾಮಿ ಮಾತನಾಡಿ, ಸಂಘದ ಪದಾಧಿಗಳು ಹಾಗೂ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ಪಡೆದು ಸಂಘದ ಶ್ರೇಯೋಭಿವೃದ್ಧಿಗೆ ಪ್ರಾಮಾಣಿಕ ವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ಒಂದು ಸಂಘ ಅಭಿವೃದ್ಧಿಯಾಗಬೇಕಾದರೆ ಎಲ್ಲರ ಸಹಕಾರ ಅಗತ್ಯ ಎಂದ ಅವರು, ಅಧ್ಯಕ್ಷನಾಗಿ ಆಯ್ಕೆಯಾಗಲು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿದರು.
ಇದೇ ವೇಳೆ ಸಂಘದ ಪದಾಧಿಕಾರಿಗಳು ನೂತನ ಅಧ್ಯಕ್ಷ ನಾರಾಯಣಸ್ವಾಮಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು.

ಜಿಲ್ಲಾ ಪತ್ರಕರ್ತರ ಮತ್ತು ಮುದ್ರಣಕಾರರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಕೌಡ್ಲೆ ಚನ್ನಪ್ಪ, ಸಂಘದ ಸದಸ್ಯರಾದ ಮಹೇಶ್, ಎಚ್.ಎ.ರಮೇಶ್, ಡಿ.ದಶರಥ್ ಕುಮಾರ್, ಶಿವು, ಐಡಿಯಲ್ ಶಿವಪ್ರಕಾಶ್, ಕೆ.ಎನ್.ನವೀನ್‌ಕುಮಾರ್, ನಾಗಯ್ಯ, ಎಂ.ಪಿ ವಿಶ್ವ, ಸಂಘದ ಕಾರ್ಯದರ್ಶಿ ಸಿ.ಭಗವಾನ್ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ