Saturday, November 21, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಬೆಂಬಲಿಸಲು ಮನವಿ

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಪರವಾಗಿ ಆಡಳಿತ ನಡೆಸುತ್ತಿರುವ ಜೆಡಿಎಸ್ ಅಭ್ಯರ್ಥಿ ರವೀಂದ್ರ ಶ್ರೀಕಂಠಯ್ಯ ಅವರನ್ನು ಬೆಂಬಲಿಸುವಂತೆ ಪರಿಶಿಷ್ಟ ಜಾತಿ ಜಾಗೃತಿ ಸಮಿತಿ ಸದಸ್ಯ ಎಂ.ಮಹದೇವಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಶ್ರೀರಂಗಪಟ್ಟಣದಲ್ಲಿ ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿ ಪ್ರತಿಷ್ಠಾಪನೆಗೆ ಕಾರಣಕರ್ತರಾಗಿದ್ದಾರೆ. ಅಲ್ಲದೇ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಡವರಿಗೆ ಆಹಾರದ ಕಿಟ್ ಗಳನ್ನು ವಿತರಿಸಿ, ಕ್ಷೇತ್ರದ ಜನರ ಹಿತಕಾಯುವ ಮೂಲಕ ಸಮಾಜಮುಖಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಹಕ್ಕುಪತ್ರ ವಿತರಣೆ
ಸುಮಾರು 60-70 ವರ್ಷಗಳಿಂದ ಹಕ್ಕುಪತ್ರ ವಂಚಿತರಾಗಿದ್ದ ಬೆಳಗೊಳ ಹೋಬಳಿಯ ಕೆ.ಆರ್.ಎಸ್‌., ಹೊಸ ಆನಂದೂರು, ಮೊಗರಳ್ಳಿ ಮಂಟಿ ಸೇರಿದಂತೆ ವಿವಿಧ ಗ್ರಾಮಗಳ ನಿವಾಸಿಗಳಿಗೆ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ, ಹಕ್ಕುಪತ್ರ ಕೊಡಿಸಿದ್ದಾರೆ. ಅಲ್ಲದೇ ಜಕ್ಕನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ ವಿಚಾರದಲ್ಲಿ ಕಳೆದ 18 ವರ್ಷಗಳಿಂದ ಮುಚ್ಚಿದ್ದ ದೇವಸ್ಥಾನದ ಬಾಗಿಲನ್ನು ತೆರೆಸಿ, ಎಲ್ಲ ಜಾತಿ ಜನಾಂಗದವರಿಗೂ ಮುಕ್ತ ಪ್ರವೇಶ ಕಲ್ಪಿಸಿ ಕೊಡಲಾಗಿದೆ ಎಂದರು.

ಗೋಷ್ಠಿಯಲ್ಲಿ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ತಾಲ್ಲೂಕು ಅಧ್ಯಕ್ಷ ಎಂ.ಪುಟ್ಟಸ್ವಾಮಿ, ಮುಖಂಡರಾದ ಕೆ.ಎಂ.ಸೋಮಶೇಖರ್, ಟಿ.ಡಿ.ಬಸವರಾಜು, ಸುರೇಶ್, ಸಿದ್ದಲಿಂಗ ಹಾಗೂ ನಂದೀಶ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ