ಮಂಡ್ಯ ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಸಂತೆಕಸಲಗೆರೆ ಮತ್ತು ತಂಗಳಗೆರೆ ಕಾಲೇಜುಗಳ 2023-24 ನೇ ಸಾಲಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿಸಿಎಂಸಿ ಕೋರ್ಸುಗಳ ದಾಖಲಾತಿಗಾಗಿ ಅರ್ಜಿಗಳನ್ನು ಅಹ್ವಾನಿಸಿದೆ.
ಮೇ 8 ರಿಂದ ಮೇ 15 ರವರೆಗೆ ಅರ್ಜಿಗಳನ್ನು ಸ್ವೀಕರಿಸಲಾಗುವುದು. ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕ, ಊಟ, ವಸತಿ, ಸಮವಸ್ತ್ರ ಹಾಗೂ ಇನ್ನಿತರೆ ಮೂಲಭೂತ ಸೌಲಭ್ಯಗಳೊಂದಿಗೆ ಉತ್ತಮ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




