ಕರ್ನಾಟಕ ವಿಧಾನಭಾ ಸಾರ್ವತ್ರಿಕ ಚುನಾವಣೆಯ ಮತದಾನ ಪ್ರಕ್ರಿಯೆ ಸುಗಮವಾಗಿ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಇದರ ಯಶಸ್ಸಿಗೆ ಶ್ರಮಿಸಿದ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಹೆಚ್. ಎನ್ ಗೋಪಾಲ ಕೃಷ್ಣ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ,, ಅಪರ ಜಿಲ್ಲಾಧಿಕಾರಿ, ಹಾಗೂ ಚುನಾವಣಾಧಿಕಾರಿಗಳು,ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿರುವ ಅವರು, ಜಿಲ್ಲೆಯಲ್ಲಿ ಹಿಂದಿನ ವಿಧಾನ ಸಭೆ ಹಾಗೂ ಲೋಕಸಭಾ ಚುನಾವಣೆಗಳಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಿದ್ದು, ಇದ್ದಕ್ಕಾಗಿ ಎಲ್ಲಾ ಮತದಾರ ಬಂಧುಗಳಿಗೆ, ಚುನಾವಣೆ ಸುಗಮವಾಗಿ ಹಾಗೂ ಶಾಂತಯುತವಾಗಿ ನಡೆಸಲು ಸಹಕರಿಸಿದ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರುಗಳಿಗೆ ಹಾಗೂ ಎಲ್ಲಾ ಅಭ್ಯರ್ಥಿಗಳಿಗೆ, ಜಿಲ್ಲಾಡಳಿತದ ಸ್ವೀಪ್ ರಾಯಭಾರಿಗಳಾಗಿದ್ದ ಖ್ಯಾತ ಚಲನಚಿತ್ರ ನಟ ನೀನಾಸಂ ಸತೀಶ್ ಹಾಗೂ ವಿಕಲಚೇತನ ಚುನಾವಣಾ ರಾಯಭಾರಿ ಡಾ. ಚಲುವರಾಜು, ಮತಗಟ್ಟೆ ಅಧಿಕಾರಿಗಳು, ಮೈಕ್ರೋ ಅಬ್ಸರ್ವರ್ ಗಳಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಸುಗಮ, ಶಾಂತಿಯುತ ಮತದಾನದ ಬಗ್ಗೆ, ಅರಿವು ಹಾಗೂ ನೈತಿಕ ಮತದಾನಕ್ಕೆ ಜಿಲ್ಲಾಡಳಿತವು ಸ್ಟೀಪ್ ಸಮಿತಿಯಿಂದ ಕೈಗೊಂಡ ಎಲ್ಲಾ ಕಾರ್ಯಕ್ರಮಗಳಿಗೆ ಹೆಚ್ಚಿನ ಪ್ರಚಾರ ಹಾಗೂ ಸಹಕಾರ ನೀಡಿದ ಪತ್ರಿಕಾ ಹಾಗೂ ದೃಶ್ಯ ಮಾಧ್ಯಮದ ಎಲ್ಲಾ ಸ್ನೇಹಿತರಿಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




