Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕಾರು ಡಿಕ್ಕಿ : ರಸ್ತೆ ದಾಟುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ

ರಸ್ತೆ ದಾಟುತ್ತಿದ್ದ ಇಬ್ಬರು ಯುವಕರಿಗೆ ಕಾರು ಡಿಕ್ಕಿಯೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸ ಬೂದನೂರು ಗ್ರಾಮದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ 7.30ರಲ್ಲಿ ಜರುಗಿದೆ‌.

ಘಟನೆಯಲ್ಲಿ ಗ್ರಾಮದ ಮೂಡೆ ಪುಟ್ಟಲಿಂಗಯ್ಯ ಎಂಬುವವರ ಪುತ್ರ ಪ್ರದೀಪ (45) ಹಾಗೂ ಕೋಣೆ ಕೆಂಪಣ್ಣ ಎಂಬುವವರ ಪುತ್ರ ಸತೀಶ್ (40) ಮೃತಪಟ್ಟವರು.

ಸಂಜೆ ಗದ್ದೆಯಿಂದ ಮನೆಗೆ ತೆರಳಲು ಹೈವೇ ದಾಟುತ್ತಿದ್ದಾಗ ಬೆಂಗಳೂರು ಕಡೆಯಿಂದ ಅತಿ ವೇಗದಲ್ಲಿ ಬಂದ ಕಾರು ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟ ಹಿನ್ನಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಒಂದೂವರೆ ಗಂಟೆಗಳ ಕಾಲ ಹೆದ್ದಾರಿ ತಡೆ ನಡೆಸಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇನ್ಸ್’ಪೆಕ್ಟರ್ ಸಿದ್ದಪ್ಪ ಹಾಗೂ‌ ಪೊಲೀಸ್ ಅಧಿಕಾರಗಳ ತಂಡ ಗ್ರಾಮಸ್ಥರ ಮನವೊಲಿಸಿ ಶವಗಳನ್ನು ಮಂಡ್ಯ ಮಿಮ್ಸ್ ಶವಾಗಾರಕ್ಕೆ ಸಾಗಿಸಿ ಹೆದ್ದಾರಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಅಪಘಾತ ಮಾಡಿದ ಕಾರಿನ‌ ಚಾಲಕ ಕಾರಿನೊಂದಿಗೆ‌ ಪೊಲೀಸರಿಗೆ ಶರಣಾಗಿದ್ದಾರೆ. ಅವೈಜ್ಞಾನಿಕ ಹೈವೇ ಕಾಮಗಾರಿಯಿಂದಾಗಿ ಕಳೆದ ಎರಡು ದಿನಗಳಿಂದ ಇದೇ ಸ್ಥಳದಲ್ಲಿ ಅಪಘಾತದಿಂದ ಮೂವರು ಸಾವನ್ನಪ್ಪಿದ್ದಾರೆ‌ ಎನ್ನಲಾಗುತ್ಗಿದೆ.

ಘಟನೆ ಕುರಿತು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಘಟನೆಯಿಂದಾಗಿ ಹೆದ್ದಾರಿಯ ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ಪರದಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ