ಮಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪಿ.ಎಂ.ನರೇಂದ್ರಸ್ವಾಮಿ 46,335 ಮತಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ನರೇಂದ್ರಸ್ವಾಮಿ ಒಟ್ಟು 1,05,413 ಮತಗಳನ್ನು ಪಡೆಯುವ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಅತೀ ಹೆಚ್ಚು ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ಎನಿಸಿಕೊಂಡಿದ್ದಾರೆ.

ಜೆಡಿಎಸ್ ನ ಡಾ.ಕೆ.ಅನ್ನದಾನಿ 59,078 ಮತಗಳನ್ನು ಪಡೆದು ಸೋಲುಂಡಿದ್ದಾರೆ. ಬಿಜೆಪಿಯ ಮುನಿರಾಜು 24,910 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.




