ಒಕ್ಕಲಿಗರ ಸಂಘದಿಂದ ಮದ್ದೂರಿನಲ್ಲಿ ಇಂದು ಪ್ರತಿಭಟನೆ
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಕಾಂಗ್ರೆಸ್ ಹೈಕಮಂಡ್ ಗೆ ಆಗ್ರಹಿಸಿ ಮದ್ದೂರಿನ ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಪ್ರತಿಭಟನೆಗೆ ಕರೆ ನೀಡಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಒಕ್ಕಲಿಗರ ಸಂಘದ ಅಧ್ಯಕ್ಷ ಪಿ. ಶಿವಪ್ಪ ಅವರು ಇಂದು (ದಿನಾಂಕ 16-5-2023 ) ಬೆಳಿಗ್ಗೆ 11 ಗಂಟೆಗೆ ಮದ್ದೂರಿನ ಪ್ರವಾಸಿ ಮಂದಿರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕ್ಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಒಕ್ಕಲಿಗ ನಾಯಕರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಆದ ಡಿ. ಕೆ. ಶಿವಕುಮಾರ್ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುವಲ್ಲಿ ಅಪಾರವಾಗಿ ಶ್ರಮಿಸಿದ್ದಾರೆ.

ಡಿ. ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರಾಗಿದ್ದು, ನಂತರ ಮುಖ್ಯ ಮಂತ್ರಿಯಾಗಲಿದ್ದಾರೆ ಎಂಬ ಆಶಯದಿಂದ ಶೇ 5ರಷ್ಟು ಒಕ್ಕಲಿಗರು ಹೆಚ್ಚುವರಿಯಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ.
ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲು ಸಾಧ್ಯವಾಗಿದೆ. ಆ ಕಾರಣ ಡಿ. ಕೆ. ಶಿವಕುಮಾರ್ ರವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಲು ಎಲ್ಲಾ ಒಕ್ಕಲಿಗ ಬಂಧುಗಳು ಪಕ್ಷಾತೀತವಾಗಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಹೋರಾಟಕ್ಕೆ ಬಲ ತುಂಬಬೇಕು ಆ ಮೂಲಕ ಒಕ್ಕಲಿಗರ ಭಾವನೆಯನ್ನು ಹೈಕಮಾಂಡ್ ಗೆ ತಲುಪಿಸಬೇಕೆಂದು ಒಕ್ಕಲಿಗ ಭಾಂದವರಲ್ಲಿ ಮನವಿಮಾಡಿದ್ದಾರೆ.




