ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC ) ಮಂಡ್ಯ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಖಾಲಿ ಇರುವ ತಾಂತ್ರಿಕ ವೃತ್ತಿಗಳಿಗೆ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಹಾಗೂ ವೆಲ್ಡರ್ (ಐ.ಟಿ.ಐ ನಲ್ಲಿ ತೇರ್ಗಡೆ ಹೊಂದಿದ) ಅಭ್ಯರ್ಥಿಗಳನ್ನು ನಿಯೋಜಿಸಿಕೊಳ್ಳಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಸ್ಥಳೀಯ ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳು ಹಾಗೂ ದಾಖಲಾತಿಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಮೇ 20 ರಿಂದ ಮೇ 31 ರ ಅವಧಿಯಲ್ಲಿ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆವರೆಗೆ(ಭಾನುವಾರ ಹಾಗೂ ಸಾರ್ವತ್ರಿಕ ರಜೆಗಳನ್ನು ಹೊರತುಪಡಿಸಿ) ಮಂಡ್ಯ ವಿಭಾಗೀಯ ಕಛೇರಿಗೆ ಹಾಜರಾಗಿ ದಾಖಲಾತಿಗಳನ್ನು ಸಲ್ಲಿಸಬಹುದಾಗಿದೆ ಎಂದಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಂಬಂಧಪಟ್ಟ ಅಧಿಕಾರಿ, ಘಟಕ ವ್ಯವಸ್ಥಾಪಕರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ.




