Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ರಾಮಚಂದ್ರು

ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಆರ್.ರಾಮಚಂದ್ರ ಅವರು ಕ್ಷೇತ್ರ ವ್ಯಾಪ್ತಿಯ  ಕೆರಗೋಡು ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದರು.

ಮಂಡ್ಯ ತಾಲೂಕಿನ ಆಲಕೆರೆ, ಹೊನಗಳ್ಳಿ ಮಠ, ಮುದುಂಗೆರೆ, ಕೀಲಾರ ಸೇರಿದಂತೆ ಇತರ ಗ್ರಾಮಗಳಿಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿ ನಂತರ ಮಾತನಾಡಿದ ಅವರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಗಲಿರುಳು ದುಡಿದ ಪರಿಶ್ರಮದಿಂದ 59 ಸಾವಿರಕ್ಕೂ ಹೆಚ್ಚು ಮತಗಳು ಬಂದಿದ್ದಾವೆ ಎಂದು ಹೇಳಿದರು.

nudikranataka.com

ಇದು ಕೊನೆಯಲ್ಲ ಎಲ್ಲರೂ ಸೇರಿ ಪಕ್ಷವನ್ನು ಸಂಘಟಿಸುವ ಮೂಲಕ ಮತ್ತೆ ಅಧಿಕಾರಕ್ಕೆ ತರೋಣ ಮುಂದಿನ ದಿನಗಳಲ್ಲಿ ನಿಮ್ಮ ಕಷ್ಟ ಸುಖಗಳಲ್ಲಿನಾನು ಭಾಗಿಯಾಗುತ್ತೇನೆ ಯಾರು ಧೃತಿಗೆಡುವುದು ಬೇಡ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮನ್ಮುಲ್ ಉಪಾಧ್ಯಕ್ಷ ಎಂ.ಎಸ್. ರಘುನಂದನ್, ಗ್ರಾ.ಪಂ.ಮಾಜಿ ಅಧ್ಯಕ್ಷ ವಸಂತರಾಜು ಸೇರಿದಂತೆ ಇತರರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ