Thursday, November 19, 2026

ಪ್ರಾಯೋಗಿಕ ಆವೃತ್ತಿ

ಸಿಎಂ ಸಿದ್ದರಾಮಯ್ಯ – ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಇಂದು 8 ಮಂದಿ ಸಚಿವರ ಪ್ರಮಾಣ ವಚನ

ಕರ್ನಾಟಕ ಸರ್ಕಾರದ ನೂತರ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಸೇರಿದಂತೆ ಅವರ ಜತೆಗೆ 8 ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆಯುವ ಅದ್ದೂರಿ ಪದಗ್ರಹಣ ಸಮಾವೇಶದಲ್ಲಿ ಸಚಿವರಾಗಿ ಪ್ರಮಾಣ ವಚನ ಮಾಡುವವರ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.

  • ಡಾ.ಜಿ ಪರಮೇಶ್ವರ
  • ಕೆ.ಎಚ್ ಮುನಿಯಪ್ಪ
  • ಕೆ.ಜೆ ಜಾರ್ಜ್
  • ಎಂ.ಬಿ ಪಾಟೀಲ್
  • ಸತೀಶ್ ಜಾರಕಿಹೊಳಿ
  • ಪ್ರಿಯಾಂಕ್ ಖರ್ಗೆ
  • ರಾಮಲಿಂಗಾರೆಡ್ಡಿ
  • ಜಮೀರ್ ಅಹ್ಮದ್ ಖಾನ್

ಪಟ್ಟಿಯಲ್ಲಿ ಎಲ್ಲಾ ಸಮುದಾಯಗಳಿಗೂ ಪ್ರಾತಿನಿಧ್ಯದ ಆಧಾರದಲ್ಲಿ ಹಿರಿಯರನ್ನು ಹೆಸರಿಸಲಾಗಿದೆ. ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣ ಸಂಪುಟ ವಿಸ್ತರಣೆ ಮತ್ತು ಖಾತೆ ಹಂಚಿಕೆ ನಡೆಯಲಿದೆ.

ಇಂದು ಮಧ್ಯಾಹ್ನ ಪ್ರಮಾಣ ವಚನ ನಡೆಯಲಿದೆ. ಈ ಕುರಿತು ರಾಜ್ಯಪಾಲರು ಅಧಿಕೃತ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಮಿತ್ರ ಪಕ್ಷಗಳ ಪ್ರಮುಖರು ಭಾಗವಹಿಸಲಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ